ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ : ಹನಿಯೂರು ಚಂದ್ರೇಗೌಡ

| Published : Sep 06 2024, 01:10 AM IST / Updated: Sep 06 2024, 11:06 AM IST

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ : ಹನಿಯೂರು ಚಂದ್ರೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಸ್ಥಳೀಯರೇ ಕ್ಷೇತ್ರದ ಶಾಸಕರಾದಲ್ಲಿ ಕ್ಷೇತ್ರದಲ್ಲಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಜತೆಗೆ ಸಮಗ್ರ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಸಹಾಯಕ ಪ್ರಾಧ್ಯಾಪಕ ಹನಿಯೂರು ಚಂದ್ರೇಗೌಡ ತಿಳಿಸಿದರು.

 ಚನ್ನಪಟ್ಟಣ :  ಸ್ಥಳೀಯರೇ ಕ್ಷೇತ್ರದ ಶಾಸಕರಾದಲ್ಲಿ ಕ್ಷೇತ್ರದಲ್ಲಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಜತೆಗೆ ಸಮಗ್ರ ಅಭಿವೃದ್ಧಿಗೂ ಪೂರಕವಾಗಲಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಸಹಾಯಕ ಪ್ರಾಧ್ಯಾಪಕ ಹನಿಯೂರು ಚಂದ್ರೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾವಂತರು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಇಂದಿನ ಅಗತ್ಯತೆಯಾಗಿದ್ದು ಈ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.ಸೈದಾಂತಿಕವಾಗಿ ಪರಸ್ಪರ ವಿರೋಧ ಪಕ್ಷಗಳಾಗಿದ್ದ ಬಿಜೆಪಿ ಹಾಗೂ ಜೆಡಿಎಸ್ ಅಧಿಕಾರಕ್ಕಾಗಿ ಒಂದುಗೂಡಿವೆ.  ಪರಸ್ಪರ ವಿರುದ್ಧ ರಾಜಕಾರಣ ಮಾಡುತ್ತಿದ್ದವರು ಇಂದು ಒಂದುಗೂಡಿದ್ದಾರೆ. 

ಜೆಡಿಎಸ್ ವಂಶಪಾರಂಪರ್ಯ ಆಡಳಿತ ನಡೆಸಲು ಮುಂದಾಗಿದೆ. ಇವರಿಗೆ ಜನರ ಕುರಿತು ಯಾವುದೇ ಕಾಳಜಿ ಇಲ್ಲ ಎಂದು ಆರೋಪಿಸಿದರು.ಉಪಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಚನ್ನಪಟ್ಟಣದ ಮೇಲೆ ವಿಶೇಷ ಆಸಕ್ತಿ ಮೂಡಿದೆ. ಕ್ಷೇತ್ರದಲ್ಲಿ ನಿವೇಶನ ನೀಡುವ ಭರವಸೆ ಉದ್ಯೋಗ ಮೇಳ ನಡೆಸಿರುವುದು ಅಧಿಕಾರಕ್ಕಾಗಿ ಹೊರತು ಜನಹಿತ ದೃಷ್ಟಿಯಿಂದಲ್ಲ.

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಜಂಪಿಂಗ್ ಸ್ಟಾರ್ ಎನಿಸಿಕೊಂಡಿದ್ದು. ಅವರಿಗೆ ರಾಜಕೀಯ ಬದ್ಧತೆ ಎಂಬುದಿಲ್ಲ. ಈ ಕಾರಣಕ್ಕಾಗಿಯೇ ಅವರು ಸಾಕಷ್ಟು ವಿರೋಧ ಕಟ್ಟಿಕೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಗುವುದೋ ಇಲ್ಲವೋ ಎಂಬ ತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.ಈ ಸಂದರ್ಭದಲ್ಲಿ ಮತ್ತಿಕೆರೆ ಚಲುವರಾಜು, ರಾಜು ಇದ್ದರು.