ಸಾರಾಂಶ
ಕನ್ನಡಪ್ರಭ ವಾರ್ತೆ ನಿಪ್ಪಾಣಿ: ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ನಿಪ್ಪಾಣಿ ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪಟ್ಟಣದ ಕಾಮ್ಗರ್ ಚೌಕ್‌ನಲ್ಲಿ ಏಕತಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಹಮ್ಮಿಕೊಂಡಿದ್ದ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಪರಸ್ಪರ ಒಡೆದಾಳುವ ಮೂಲಕ ದೇಶದ ನೆಲ, ಜಲ, ಸಂಪತ್ತನ್ನು ಕಾರ್ಪೊರೇಟ್ ಕಂಪನಿಗಳಿಗೆ ಲೂಟಿ ಹೊಡೆಯಲು ಮುಕ್ತ ಅವಕಾಶ ನೀಡಿರುವ ಕೋಮುವಾದಿ ಬಿಜೆಪಿ ಸೋಲಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಬೇಕು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಕೋರಿದರು.ಮಾಜಿ ಸಚಿವ ವೀರಕುಮಾರ ಪಾಟೀಲ್, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕಾಂಗ್ರೆಸ್ ಮುಖಂಡರಾದ ರಾಜೇಶ್ ಕದಮ್, ಪಂಕಜ ಪಾಟೀಲ್, ರೋಹಣ ಸಾಳವೆ, ಮಾಜಿ ಸಚಿವ ವೀರಕುಮಾರ ಪಾಟೀಲ್, ಗಣೇಶ್ ನಿಂಬಾಳಕರ್, ರಾಜು ವಡ್ಡರ್, ಇರ್ಫಾನ್, ರಾಜಪಟಾಣ ಸಾಬ್ ಸೇರಿದಂತೆ ಏಕತಾ ಫೌಂಡೇಶನ್ ನ ಸರ್ವ ಸದಸ್ಯರು, ಅಪಾರ ಸಂಖ್ಯೆಯ ಸಾರ್ವಜನಿಕರು ಇದ್ದರು.ಕೋಟ್......
ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ. ಕೋವಿಡ್ ಅವಧಿಯಲ್ಲಿ ಕೆಲಸ ಮಾಡಿದ ಏಕತಾ ಫೌಂಡೇಶನ್ ಸಾಮಾಜಿಕ ಕಾರ್ಯ, ಕಳಕಳಿ ಎಲ್ಲರಿಗೂ ಪ್ರೇರಣೆಯಾಗಬೇಕು. ಇಂತಹ ಫೌಂಡೇಶನ್‌ಗಳ ಸಂಖ್ಯೆಯೂ ಹೆಚ್ಚಾಗಬೇಕು.-ಸತೀಶ್ ಜಾರಕಿಹೊಳಿ, ಸಚಿವ.