ಸಾರಾಂಶ
ಕನ್ನಡಪ್ರಭ ವಾರ್ತೆ ಸಿಂಧನೂರು
ಸಾವಿರಾರು ಜಾತಿ, ಧರ್ಮ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳ ಇದ್ದರೂ ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ ಎಂದು ಎಂದು ಶಾಸಕ ಹಂಪನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕಾಡಳಿತದಿಂದ ಶುಕ್ರವಾರ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ದೇಶದ ಸ್ವಾತಂತ್ರ್ಯ ಕ್ಕಾಗಿ ಅನೇಕ ಮಹನೀಯರು, ಹೋರಾಟಗಾರರು ತ್ಯಾಗ ಬಲಿದಾನ ಮಾಡಿದ್ದಾರೆ. ಅವರ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ ಮಾತನಾಡಿದರು.ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ವಾಯು ಸೇನೆಯ ಯೋಧ ಶಿವುಕುಮಾರ ಹಿರೇಮಠ ದಂಪತಿಗಳನ್ನು ಸನ್ಮಾನಿಸಲಾಯಿತು. ನಗರಸಭೆ ಹಂಗಾಮಿ ಅಧ್ಯಕ್ಷೆ ಮಂಜುಳಾ ಪ್ರಭುರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಡಿವೈಎಸ್ಪಿ ಬಿ.ಎಸ್.ತಳವಾರ, ನಗರಸಭೆ ಪ್ರಭಾರಿ ಪೌರಾಯುಕ್ತೆ ಶೃತಿ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಶರಣಪ್ಪ ರಡ್ಡೇರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಉಪಸ್ಥಿತರಿದ್ದರು. ಪೊಲೀಸ್ ತಂಡ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವೀರೇಶ ಗೋನವಾರ ನಿರೂಪಿಸಿದರು.