ಸಾರಾಂಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಭಿನ್ನತೆಯಲ್ಲಿ ಏಕತೆಯನ್ನು ಸಾಧಿಸಿದ ರಾಷ್ಟ್ರ ಭಾರತವಾಗಿದೆ. ಸಂವಿಧಾನದಿಂದಾಗಿ ದೇಶಕ್ಕೆ ಭದ್ರ ಬುನಾದಿ ಲಭಿಸಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಆಯೋಜಿಸಲಾದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರು ದೇಶದ ಪ್ರತಿಯೊಬ್ಬ ಪ್ರಜೆಗೆ ಸಮಾನವಾಗಿ ಬದುಕುವ ಹಕ್ಕು ಮತ್ತು ಸ್ವಾತಂತ್ರ್ಯ ಕಲ್ಪಿಸಿದ್ದಾರೆ ಎಂದರು.
ದೇಶ ವಿದೇಶಗಳಲ್ಲಿ ಸಂಚರಿಸಿ ನಮ್ಮದೆ ಆದ ಭಾರತದ ಮಾದರಿ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನ ರಚನೆ ನೆನಪಿಗಾಗಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಅಚರಣೆ ಮಾಡಲಾಗುತ್ತಿದೆ. ಪ್ರಜೆಗಳು ಆಳುವವರನ್ನು ಆಯ್ಕೆ ಮಾಡುತ್ತಾರೆ. ಈ ಮೂಲಕ ಪ್ರಜೆಗಳೇ ಸ್ವತಃ ಆಡಳಿತ ನಡೆಸುವ ಮಾದರಿ ದೇಶದಲ್ಲಿದೆ. ಸಂವಿಧಾನದ ನಿರ್ಮಾತೃಗಳ ಆಶಯದಂತೆ ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮ ನಿರಪೇಕ್ಷ ಪ್ರಜಾಸತ್ತಾತ್ಮಕ ದೇಶವೆಂದು ಒಪ್ಪಿಕೊಂಡಿದ್ದು, ಯಾವುದೇ ಧರ್ಮ, ಭಾಷೆ, ಪ್ರಾದೇಶಿಕ ಭಾವನೆಗಳಿಗೆ ಎಡೆ ಮಾಡಿಕೊಡದೇ ನಾವೆಲ್ಲ ನಡೆದುಕೊಳ್ಳಬೇಕಿದೆ ಎಂದು ಹೇಳಿದರು.ಪಟ್ಟಣದ ಸಮೀಪವಿರುವ ಇಂಗಳಗಿ ಗ್ರಾಮದ ಹತ್ತಿರ ಸುಂದರ ಕ್ರೀಡಾಂಗಣ ನಿರ್ಮಾಣ ಹಾಗೂ ಕಾಲೇಜಿನ ಕಾಮಗಾರಿಗೆ ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು. ಮುಂದೆ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಮತ್ತು ತಾಲೂಕು ದಂಡಾಧಿಕಾರಿ ಪ್ರಕಾಶ ಸಿಂದಗಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಅವರು ಆರೋಗ್ಯ ಲೆಕ್ಕಿಸದೆ ದೇಶ ವಿದೇಶಗಳಲ್ಲಿ ಸಂಚರಿಸಿ ನಮ್ಮದೆ ಆದ ಸಂವಿಧಾನ ರಚಿಸಿದ್ದಾರೆ. ನಮ್ಮ ದೇಶ ವಿವಿಧತೆಯಲ್ಲಿ ಏಕತೆ ಸಾರುವ ಮೂಲಕ ಸಂಸ್ಕೃತಿ, ಕಲೆ, ಸಾಹಿತ್ಯ ಮತ್ತು ಸಂಗೀತ ಎಲ್ಲಾ ರಂಗಗಳಲ್ಲೂ ಸಾಧನೆ ಮಾಡುವ ಮೂಲಕ ದೇಶ ವಿದೇಶಗಳಲ್ಲಿ ಜನಪ್ರಿಯತೆ ಹೆಚ್ಚಿಸಿದ್ದಾರೆ ಎಂದು ಹೇಳಿದರು.
ಸಂವಿಧಾನದ ಕುರಿತು ಕಲಬುರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ರಮೇಶ ಮಾಡಿಯಾಳಕರ ವಿಶೇಷ ಉಪನ್ಯಾಸ ನೀಡಿದರು. ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತೆ ಮತ್ತು ದೇಶಭಕ್ತಿ ಸಾರುವ ಹಾಡುಗಳಿಗೆ ಆಕರ್ಷಕ ನೃತ್ಯ ಮಾಡಿದರು. ಇದೆ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.ಈ ವೇಳೆ ಪಪಂ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ತಾಪಂ ಇಒ ಭಾರತಿ ಚೆಲುವಯ್ಯ, ಪಿಎಸ್ಐ ಬಸವರಾಜ ತಿಪ್ಪರಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಂ.ಜಿ.ಯಂಕಂಚಿ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಜಿ.ಪಿ.ಬಿರಾದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲಿಕಾರ, ಪಪಂ ಸದಸ್ಯರಾದ ಕಾಸುಗೌಡ ಬಿರಾದಾರ ಜಲಕತ್ತಿ, ಬಸೀರ ಅಹ್ಮದ್ ಬೇಪಾರಿ, ಶಾಂತಯ್ಯ ಜಡಿಮಠ, ಉಮೇಶ ರೂಗಿ, ಕಾಶಿನಾಥ ಭಜಂತ್ರಿ, ಕಾಸಪ್ಪ ಜಮಾದಾರ, ಸುಮಂಗಲಾ ಸೇಬೆನ್ನವರ್ ಸಿಂಧೂರ ಡಾಲೇರ, ಪ್ರಕಾಶ ಮಲ್ಹಾರಿ, ವಿನೋದ ಚವ್ಹಾಣ, ಸೋಮು ದೇವೂರ, ಅಬ್ದುಲ್ ಚೌದರಿ, ನಬಿರಸೂಲ ಮಣೂರ, ಬಸವರಾಜ ದೇವಣಗಾಂವ, ಕಾಸು ಕಡ್ಲೇವಾಡ, ಮುಖಂಡರಾದ ಡಾ.ಆರ್.ಆರ್.ನಾಯಕ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚನ್ನವೀರಪ್ಪ ಕುದುರಿ, ಮುನೀರ್ ಅಹ್ಮದ್ ಮಳಖೇಡ, ಜಬ್ಬಾರ್ ಮೊಮೀನ, ಪ್ರಕಾಶ ಗುಡಿಮನಿ, ರಮೇಶ ಮ್ಯಾಕೇರಿ, ರಾವತ್ ತಳಕೇರಿ, ಶಬ್ಬೀರ್ ಮುಲ್ಲಾ, ರಾಘವೇಂದ್ರ ಗುಡಿಮನಿ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ನವಲಿ ನಿರೂಪಿಸಿದರು. ಕಂದಾಯ ಇಲಾಖೆಯ ನಿರೀಕ್ಷಕರಾದ ಸುರೇಶ ಮ್ಯಾಗೇರಿ ವಂದಿಸಿದರು.