ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು: ಶಾಸಕ ಟಿ.ಡಿ.ರಾಜೇಗೌಡ

| Published : Jul 07 2024, 01:22 AM IST

ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು: ಶಾಸಕ ಟಿ.ಡಿ.ರಾಜೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ಜಗತ್ತಿಗೆ ಶಾಂತಿ, ಅಹಿಂಸೆ ಬೋಧಿಸಿದ ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಜಗತ್ತಿಗೆ ಶಾಂತಿ, ಅಹಿಂಸೆ ಬೋಧಿಸಿದ ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ತಾಲೂಕಿನ ನೆಮ್ಮಾರು ಪಂಚಾಯಿತಿ ನೆಮ್ಮಾರು ಸರ್ಕಾರಿ ಪದವಿ ಪೂರ್ವ ಕಾಲೇಜು ಸರ್ಕಾರಿ ಪ್ರೌಢ ಶಾಲಾವರಣದಲ್ಲಿ ಆಯೋಜಿಸಲಾದ ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಅವರವರ ಧರ್ಮ ಶ್ರೇಷ್ಠ.ಇನ್ನೊಂದು ಧರ್ಮವನ್ನು ಟೀಕಿಸುವ, ಹತ್ತಿಕ್ಕುವ ಹಕ್ಕು ಯಾರಿಗೂ ಇಲ್ಲ ಎಂದರು.

ನಮ್ಮ ಧರ್ಮ, ಸಂಸ್ಕೃತಿಯನ್ನು ಆಚರಿಸುವ ಜೊತೆಗೆ ಅನ್ಯ ಧರ್ಮ, ಸಂಸ್ಕೃತಿಯನ್ನು ಗೌರವಿಸಬೇಕು. ಇದು ಜಾತ್ಯಾತೀತ ರಾಷ್ಟ್ರ. ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಹಕ್ಕುಗಳನ್ನು ನೀಡಿದೆ. ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಸಂವಿಧಾನದಲ್ಲಿ ಎಲ್ಲಾ ವರ್ಗದವರಿಗೂ ಸಮಾನತೆ ನೀಡಿದ್ದಾರೆ. ನಾವು ದೇಶದ ಸಂವಿಧಾನ, ಕಾನೂನನ್ನು ಗೌರವಿಸಬೇಕು.

ಎನ್‌ಎಸ್‌ಎಸ್ ಜಾತ್ಯತೀತ ಸಂಘಟನೆ. ಇದು ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ, ಉತ್ತಮ ಸಂಸ್ಕಾರ, ಸಂಸ್ಕೃತಿ ಬೆಳೆಸುತ್ತದೆ. ಸ್ವಚ್ಛತೆ, ಸಮಾಜ ಸೇವೆ ಎನ್ಎಸ್‌ಎಸ್ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಉತ್ತಮ ಮೌಲ್ಯ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಎನ್ ಎಸ್ಎಸ್‌ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಬಿರಗಳ ಮೂಲಕ ಗ್ರಾಮಸ್ಥರೊಡನೆ ಸ್ನೇಹ, ಬಾಂಧವ್ಯ ವೃದ್ಧಿಸುತ್ತದೆ. ಶಿಬಿರಗಳಲ್ಲಿ ವಿದ್ಯಾರ್ಥಿಗಳು ಹಾಲ್ಗೊಳ್ಳಬೇಕು ಎಂದರು.

ಪ್ರಾಂಶುಪಾಲರಾದ ಭಾರತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ತ್ರಿಮೂರ್ತಿ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಿ,ಮಂಜುನಾಥ್, ರಾಘವೇಂದ್ರ ರೆಡ್ಡಿ, ಸ್ವಾಗತ ಸಮಿತಿಯ ರವಿಶಂಕರ್, ಪುಟ್ಟಪ್ಪ ಹೆಗ್ಡೆ, ಕೆ.ಆರ್.ವೆಂಕಟೇಶ್, ದಿನೇಶ್ನೆ ಹೆಗ್ಡೆ, ನೆಮ್ಮಾರು ಪ್ರೌಢಶಾಲೆ ಮುಖ್ಯ ಶಿಕ್ಷಕ ಶ್ರೀನಾಥ್‌, ಮಹಾಬಲ, ರಾಘವೇಂದ್ರ ಮತ್ತಿತರರು ಇದ್ದರು.

6 ಶ್ರೀ ಚಿತ್ರ

ಶೃಂಗೇರಿ ತಾಲೂಕಿನ ನೆಮ್ಮಾರಿನಲ್ಲಿ ನಡೆದ ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. ಪ್ರಾಂಶುಪಾಲರಾದ ಭಾರತಿ ಮತ್ತಿತರರು ಇದ್ದರು.