ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಸಂವಿಧಾನದಲ್ಲಿ ಅಡಕವಾಗಿರುವ ಸ್ವಾತಂತ್ರ್ಯ, ಸಮಾನತೆ, ಬಾತೃತ್ವ, ಏಕತೆ, ಸಹೋದರತ್ವ ಅಂಶಗಳಿಂದ ಭಾರತ ವಿಶ್ವ ಗುರುವಾಗುವತ್ತ ದಾಪುಗಾಲು ಹಾಕುತ್ತಿದೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.ಪಟ್ಟಣದ ನಾಲ್ವಡಿ ಕೃಷ್ಟರಾಜ ಒಡೆಯರ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ಭಾರತ ವಿಭಿನ್ನ ಧರ್ಮಗಳು, ಭಾಷೆ, ಆಚಾರ ವಿಚಾರ, ರೂಢಿಸಂಪ್ರದಾಯಗಳು, ಕಲೆ, ಉಡುಪು ಸೇರಿದಂತೆ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ ಎಂದರು.
ದೇಶದ ಭದ್ರಬುನಾದಿಯಾದ ಸಂವಿಧಾನವನ್ನು ಜಾರಿಗೆ ತರಲು ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಅನೇಕ ನಾಯಕರು ಶ್ರಮಿಸಿದ್ದಾರೆ ಎಂದರು.ತಹಸೀಲ್ದಾರ್ ನಿಸರ್ಗಪ್ರಿಯ ಧ್ವಜ ಸಂದೇಶ ನೀಡಿ, ಭಾರತ ಗಣರಾಜ್ಯವಾದ ನಂತರ ತನ್ನದೇ ಆದ ಗುರಿಯೊಂದಿಗೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ವಿಶ್ವದಲ್ಲಿ ಮುಂದುವರಿದ ದೇಶಗಳಲ್ಲಿ ಒಂದಾಗುವತ್ತ ಸಾಗುತ್ತಿದೆ ಎಂದರು.
ಇದೇ ವೇಳೆ ತಾಲೂಕಿನಲ್ಲಿ ಕಬಡ್ಡಿ, ಬಾಲ್ ಬ್ಯಾಡ್ಮಂಟಿನ್ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಶಾಲಾ ಮಕ್ಕಳು ದೇಶಪ್ರೇಮದ ಗೀತೆಗಳ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮು, ತಾಪಂ ಇಒ ಸತೀಶ್, ಪುರಸಭಾ ಸದಸ್ಯರಾದ ಗಿರೀಶ್, ಇಂದ್ರಾಣಿ ವಿಶ್ವನಾಥ್, ಮಾಜಿಸದಸ್ಯ ಹೇಮಂತ್‌ಕುಮಾರ್, ಜಿಲ್ಲಾ ಜೆಡಿಎಸ್ ಉಪಾದ್ಯಕ್ಷ ನಾಗೇಶ್, ಜಿಪಂ ಮಾಜಿ ಸದಸ್ಯ ರಾಮದಾಸ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವರಾಮೇಗೌಡ, ರಾಜ್ಯಪರಿಷತ್ ಸದಸ್ಯ ಮಂಜುನಾಥ್, ಗೌರವಾದ್ಯಕ್ಷ ವಿಶ್ವನಾಥ್, ಜಯಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಸೋಮಶೇಖರ್, ಬಿಇಒಸೀತಾರಾಮು, ನಯನಕ್ಷತ್ರಿಯ ತಾಲೂಕು ಅಧ್ಯಕ್ಷ ಶಿವಪ್ಪ, ತಾಲೂಕು ಮಟ್ಟದ ಅಧಿಕಾರಿಗಳು, ಸಂತೇಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ಟಿಶಾಸಕರ ಆಪ್ತ ಸಹಾಯಕ ಪ್ರತಾಪ್ ಸೇರಿದಂತೆ ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.
ಸಂವಿಧಾನ ರಕ್ಷಣೆ, ಉಳಿವಿಗೆ ಜಾಗೃತರಾಗಿ: ಶಿಕ್ಷಕಿ ಶಾಯಿಸ್ತ ನಾಜ್ದೇವಲಾಪುರ: ಸಂವಿಧಾನ ರಕ್ಷಣೆ, ಉಳಿವಿಗಾಗಿ ಸದಾ ಜಾಗೃತರಾಗಬೇಕಿದೆ ಎಂದು ಶಿಕ್ಷಕಿ ಶಾಯಿಸ್ತ ನಾಜ್ ತಿಳಿಸಿದರು.ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ದೇಶಕ್ಕೆ ವಿಶ್ವದಲ್ಲಿಯೇ ಅತಿದೊಡ್ಡ ಸಂವಿಧಾನ ಜಾರಿಗೊಳಿಸಿದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಿದ್ದೇವೆ. ನಾವೆಲ್ಲರೂ ಸಂವಿಧಾನದ ಮಹತ್ವ ಅರಿತು ಪ್ರಾಮುಖ್ಯತೆಯನ್ನು ತಿಳಿಸುವುದು ಅಗತ್ಯವಾಗಿದೆ ಎಂದರು.ಈ ವೇಳೆ ಪ್ರಾಂಶುಪಾಲರಾದ ನಂಜಮಣಿ, ಗ್ರಾಪಂ ಅಧ್ಯಕ್ಷ ಗೋವಿಂದರಾಜು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್, ಶಾಲಾ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಪತ್ರಕರ್ತ ಜಗದೀಶ್ ಗಣ್ಯರು ಹಾಜರಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.