ನೂರಾರು ವರ್ಷಗಳ ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ನಮ್ಮ ನಾಯಕರು, ನಮಗೆ ಸ್ವಾತಂತ್ರ್ಯ ತಂದು ಕೊಟ್ಟು, ನಮ್ಮನ್ನು ಗುಲಾಮಗಿರಿಯಿಂದ ಹೊರತಂದ ಮೇಲೆ ನಮ್ಮ ದೇಶ 80 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಇಂದು ನಿಂತಿದ್ದೇವೆ. ಇದಕ್ಕೆ ಕಾರಣ ನಮ್ಮನ್ನು ಆಳಿ ಹೋದ ಸರ್ಕಾರಗಳು, ಸಾವಿರಾರು ಯೋಜನೆಗಳು ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಹೊನ್ನಾಳಿ
ನೂರಾರು ವರ್ಷಗಳ ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ನಮ್ಮ ನಾಯಕರು, ನಮಗೆ ಸ್ವಾತಂತ್ರ್ಯ ತಂದು ಕೊಟ್ಟು, ನಮ್ಮನ್ನು ಗುಲಾಮಗಿರಿಯಿಂದ ಹೊರತಂದ ಮೇಲೆ ನಮ್ಮ ದೇಶ 80 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಇಂದು ನಿಂತಿದ್ದೇವೆ. ಇದಕ್ಕೆ ಕಾರಣ ನಮ್ಮನ್ನು ಆಳಿ ಹೋದ ಸರ್ಕಾರಗಳು, ಸಾವಿರಾರು ಯೋಜನೆಗಳು ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟರು.ಪಟ್ಟಣದ ಸಿದ್ದರಾಮಯ್ಯ ಕ್ರೀಡಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.
1950ರಲ್ಲಿ ಸಂವಿಧಾನ ಜಾರಿ ಬಂದ ನಂತರ ಪಂಚವಾರ್ಷಿಕ ಯೋಜನೆಗಳು, ಭೂ ಸುಧಾರಣಾ ಕಾಯ್ದೆಗಳ ಮೂಲಕ, ಬ್ಯಾಂಕ್ ರಾಷ್ಟ್ರೀಕರಣ ಮೂಲಕ ವಿಜ್ಞಾನ, ತಂತ್ರಜ್ಞಾನಗಳ ಮೂಲಕ ಗಣನೀಯ ಅಭಿವೃದ್ಧಿ ಸಾಧಿಸಿದ್ದೇವೆ ಎಂದು ಹೇಳಿದರು.ಕಳೆದ ಮೂರು ವರ್ಷಗಳಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳು ಬಡವರನ್ನು ಬಡತನ ರೇಖೆಯಿಂದ ಮೇಲೆತ್ತುವ ಕೆಲಸವಾಗಿದೆ. ನಮ್ಮ ತಾಲ್ಲೂಕಿನಲ್ಲಿ ಪ್ರಗತಿಪಥ ಯೋಜನೆಯಡಿಯಲ್ಲಿ25ಕೋಟಿ, ಪಿಡಬ್ಯೂಡಿ ಇಲಾಖೆಯಲ್ಲಿ 65ಕೋಟಿ ವೆಚ್ಚದ ಕಾಮಗಾರಿಗಳ ಪೈಕಿ ಕೆಲವು ಮುಗಿದಿದ್ದು ಕೆಲವು ಪ್ರಗತಿಯಲ್ಲಿವೆ. ಸಿಎಂ ವಿಶೇಷ ಘಟಕ ಯೋಜನೆಯಡಿ 75 ಕೋಟಿ ರು. ಕಾಮಗಾರಿ ಕೈಗೊಳ್ಳಲಾಗಿದೆ. ಸಣ್ಣ ನೀರಾವರಿಯಲ್ಲಿ 20 ಕೋಟಿ ರು. ಕಾಮಗಾರಿ ಕೈಗೊಳ್ಳಲಾಗಿದೆ.
ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ ಅವರು 80 ನೇ ಸ್ವಾತಂತ್ರ್ಯ ದಿನ ಹಿನ್ನೆಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಂತರ ಧ್ವಜವಂದನೆ, ಪಥ ಸಂಚಲನ ಹಾಗೂ ಮಕ್ಕಳಿಂದ ಕವಾಯತು ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕ್ರೀಡಾ ಸಾಧಕರಿಗೆ, ನಿವೃತ್ತ ಸೈನಿಕರಿಗೆ, ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಗಳು ನಡೆದವು.ಬಿಇಒ ಕೆ.ಟಿ. ನಿಂಗಪ್ಪ, ಪುರಸಭೆ ಮುಖ್ಯಾಧಿಕಾರಿ ಟಿ. ಲೀಲಾವತಿ, ಸಿಪಿಐ ಸುನಿಲ್ ಕುಮಾರ್, ತಾ. ದೈಹಿಕ ಶಿಕ್ಷಣಾಧಿಕಾರಿ ಜಗದೀಶ್, ಕ್ರೀಡಾಧಿಕಾರಿ ಕಾಳಿಂಗಪ್ಪ, ಗ್ರೇಡ್- 2 ತಹಸೀಲ್ದಾರ್ ಸುರೇಶ್, ಆರ್‌ಡಿಪಿಆರ್ ಎಇಇ ಸೋಮ್ಲಾನಾಯ್ಕ, ಸಬ್ ರಿಜಿಸ್ಟಾçರ್ ನವೀನ್‌ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎ.ಗದ್ದಿಗೇಶ್, ತಾ.ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್‌ಕುಮಾರ್ ಹಾಜರಿದ್ದರು.