ಶ್ರೇಷ್ಟ ಸಂವಿಧಾನದಿಂದ ಬಲಿಷ್ಟ ಭಾರತ: ಸಚಿವ ಪರಮೇಶ್ವರ್‌

| Published : Jan 27 2025, 12:46 AM IST

ಶ್ರೇಷ್ಟ ಸಂವಿಧಾನದಿಂದ ಬಲಿಷ್ಟ ಭಾರತ: ಸಚಿವ ಪರಮೇಶ್ವರ್‌
Share this Article
  • FB
  • TW
  • Linkdin
  • Email

ಸಾರಾಂಶ

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ.

ಕನ್ನಡಪ್ರಭ ವಾರ್ತೆ ತುಮಕೂರುಶ್ರೇಷ್ಟ ಸಂವಿಧಾನದ ಫಲವಾಗಿ ಭಾರತವು ವಿಶ್ವದಲ್ಲಿ 4ನೇ ಆರ್ಥಿಕ ದೇಶವಾಗಿ ಅಭಿವೃದ್ಧಿ ಹೊಂದಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಭಾನುವಾರ ಧ್ವಜಾರೋಹಣಾ ನೆರವೇರಿಸಿ ಮಾತನಾಡಿದ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ಹೇಳಿದರು.ಬಡತನ, ಹಸಿವು, ಅನಕ್ಷರತೆಯಿಂದ ಬಳಲುತ್ತಿದ್ದ ಅಂದಿನ ಭಾರತ, ಬಲಿಷ್ಟ ಭಾರತವಾಗಿ ಬೆಳೆದು ಹಲವಾರು ಮಹತ್ತರ ಸಾಧನೆಗಳನ್ನು ಮಾಡಿದೆ. ಇದರಲ್ಲಿ ಪ್ರತಿಯೊಬ್ಬ ಭಾರತೀಯನ ಶ್ರಮವಿದೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಸಿಗಲಿ ಎಂದು ಆಶಿಸಿದರು.ಲಿಂಗೈಕ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರು ಇಡೀ ದೇಶದಲ್ಲಿ ಯಾವುದೇ ಧಾರ್ಮಿಕ ಸಂಸ್ಥೆ ನೀಡದಂತಹ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕೋಟ್ಯಂತರ ಬಡ ಮಕ್ಕಳಿಗೆ ಜಾತಿ, ಮತ, ಬೇಧವಿಲ್ಲದೆ ಅನ್ನ, ಆಶ್ರಯ, ಅಕ್ಷರ ದಾಸೋಹಿಯಾಗಿದ್ದ ಪರಮಪೂಜ್ಯ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ಇಂದಿನ ಸಿದ್ಧಲಿಂಗ ಸ್ವಾಮೀಜಿ ಅವರು ಸಾಗುತ್ತಿದ್ದಾರೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಸಚಿವ ಪರಮೇಶ್ವರ ಅವರು ಮಠದ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿದ್ದರು. ಶಾಸಕರಾದ ಜ್ಯೋತಿಗಣೇಶ, ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಅವರು ಉಪಸ್ಥಿತರಿದ್ದರು.