ಕನ್ನಡಪ್ರಭ ವಾರ್ತೆ ರಾಮದುರ್ಗಭವ್ಯ ಭಾರತದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ದೇಶಕ್ಕೆ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ಸಮಯ ಪ್ರಜ್ಞೆ ಬೆಳೆಸುವ ಹೊಣೆ ಶಿಕ್ಷಕರ ಮೇಲಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ಭವ್ಯ ಭಾರತದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ದೇಶಕ್ಕೆ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ಸಮಯ ಪ್ರಜ್ಞೆ ಬೆಳೆಸುವ ಹೊಣೆ ಶಿಕ್ಷಕರ ಮೇಲಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳಗಾವಿ ಜಿಲ್ಲಾ ಪಂಚಾಯತಿ, ತಾಲೂಕಾಡಳಿತ ಹಾಗೂ ಶಿಕ್ಷಕ ದಿನೋತ್ಸವ ಆಚರಣಾ ಸಮಿತಿ ಸಹಯೋಗದಲ್ಲಿ ಮಂಗಳವಾರ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದಲ್ಲಿರುವ ಗುರುಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಬಹುತೇಕ ಬಡವರ ಮಕ್ಕಳು ಕಲಿಯಲು ಬರುತ್ತಾರೆ. ಶಿಕ್ಷಕರು ಮಕ್ಕಳನ್ನು ತಮ್ಮ ಮಕ್ಕಳೆಂದು ತಿಳಿದು ಗುಣಾತ್ಮಕ ಮತ್ತು ನೈತಿಕತೆಯ ಶಿಕ್ಷಣ ನೀಡಲು ಮುಂದಾಗಬೇಕಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಗೌರವಿಸಿ ಬಿಳ್ಕೋಡಲಾಯಿತು. ತಾಲೂಕಾ ಮಟ್ಟದ ಕಲೋತ್ಸವ, ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಿಗೆ ಶಾಸಕರು ಚಾಲನೆ ನೀಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲೂಕಾ ಅಧ್ಯಕ್ಷ ಜಿ.ಬಿ.ರಂಗನಗೌಡ್ರ, ತಾಪಂ ಪ್ರಭಾರ ಇಒ ಮಹ್ಮದಇಜಾನ ಸಬೂರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ.ಪಾಟೀಲ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಸ್.ವೈ.ಸನ್ನಿ, ಅನುಷ್ಠಾನಾಧಿಕಾರಿಗಳ ಸಂಘದ ಅಧ್ಯಕ್ಷ ಪಾಂಡುರಂಗ ಜಟಗನ್ನವರ, ರೂಪ್ಸಾ ಅಧ್ಯಕ್ಷ ಈರಣ್ಣ ಬುಡ್ಡಾಗೋಳ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ ಏಣಿ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.ಪಿಎಂ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ರಾಜಶೇಖರ ಹಿರೇಮಠ ಸ್ವಾಗತಿಸಿದರು. ಕ್ಷೇತ್ರಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಸ್.ಜಂಗವಾಡ ಮತ್ತು ಅಶೋಕ ಬೂದಿ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಐ.ಛಾಯಪ್ಪಗೋಳ ವಂದಿಸಿದರು.