ಸಾರಾಂಶ
ಬಾಗಲಕೋಟೆ: ಭಾರತದ ಪ್ರಜಾಪ್ರಭುತ್ವ ಪ್ರಪಂಚಕ್ಕೆ ಮಾದರಿಯಾಗಿದೆ. ಸಂವಿಧಾನದಲ್ಲಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಲಾಗಿದ್ದು, ಹಕ್ಕು ಎಷ್ಟು ಮುಖ್ಯವೋ ಕರ್ತವ್ಯವೂ ಅಷ್ಟೆ ಮುಖ್ಯವಾಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು. ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಭಾರತದ ಪ್ರಜಾಪ್ರಭುತ್ವ ಪ್ರಪಂಚಕ್ಕೆ ಮಾದರಿಯಾಗಿದೆ. ಸಂವಿಧಾನದಲ್ಲಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಲಾಗಿದ್ದು, ಹಕ್ಕು ಎಷ್ಟು ಮುಖ್ಯವೋ ಕರ್ತವ್ಯವೂ ಅಷ್ಟೆ ಮುಖ್ಯವಾಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂವಿಧಾನದಲ್ಲಿ ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ವಿಸ್ತಾರವಾಗಿ ವಿವರಿಸಲಾಗಿದೆ. ಇಂದು ನಾವು ಕೇವಲ ಹಕ್ಕುಗಳ ಬಗ್ಗೆ ಯೋಚನೆ ಮಾಡುತ್ತೇವೆ. ಕರ್ತವ್ಯ ಪಾಲಿಸುವುದು ಸಹ ಮುಖ್ಯವಾಗಿದೆ. ದೇಶದ ಅಭಿವೃದ್ಧಿ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವ್ಯವಸ್ಥೆ ಪ್ರಜಾಪ್ರಭುತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿರುವುದು ನಮ್ಮ ಮುಂದಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಎರಡು ಅವದಿಯಲ್ಲಿ ದೇಶದ ಅಭಿವೃದ್ಧಿ, ಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮ ರೂಪಿಸಿ, ದೇಶವನ್ನು ಸುಭದ್ರವಾಗಿ ಮುನ್ನೆಡೆಸಿದ್ದು ಇಡಿ ಪ್ರಪಂಚವೆ ಮೆಚ್ಚಿದೆ ಎಂದರು.ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ಭಾರತದ ಪ್ರಜಾಪ್ರಭುತ್ವ ಹಾಗೂ ಗಣರಾಜ್ಯೋತ್ಸವ ಕುರಿತು ಮಾತನಾಡಿದರು.
ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್. ಪಾಟೀಲ, ಮುಖಂಡ ಡಾ.ಎಂ.ಎಸ್. ದಡ್ಡೆನ್ನವರ, ಗುಂಡುರಾವ ಶಿಂಧೆ, ಬಸಲಿಂಗಪ್ಪ ನಾವಲಗಿ, ಬಸವರಾಜ ಯಂಕಂಚಿ, ರಾಜು ರೇವಣ್ಕರ, ಸತ್ಯನಾರಾಯಣ ಹೆಮಾದ್ರಿ, ರಾಜು ನಾಯ್ಕರ, ಸದಾಬಂದ ನಾರಾ, ಶಿವಾನಂದ ಟವಳಿ, ರಾಜು ಮುದೆನೂರ, ಬಸವರಾಜ ಅವರಾದಿ, ಶೋಭಾ ರಾವ್, ಸರಸ್ವತಿ ಕುರಬರ, ಬಸವರಾಜ ನಾಶಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಸೇರಿದಂತೆ ಅನೇಕರು ಇದ್ದರು. ನಂತರ ನಗರದಲ್ಲಿರುವ ಡಾ.ಬಿ.ಆರ್.ಅಂಬೆಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.