ರಾಮನಗರ: ಭಾರತ ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರವಾಗಿದ್ದು, ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸಲು ಯುವ ಜನ ಸೇರಿದಂತೆ ಪ್ರತಿಯೊಬ್ಬರು ಜವಾಬ್ದಾರಿಯುತ ಹಕ್ಕುಗಳನ್ನು ಚಲಾಯಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು
ರಾಮನಗರ: ಭಾರತ ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರವಾಗಿದ್ದು, ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸಲು ಯುವ ಜನ ಸೇರಿದಂತೆ ಪ್ರತಿಯೊಬ್ಬರು ಜವಾಬ್ದಾರಿಯುತ ಹಕ್ಕುಗಳನ್ನು ಚಲಾಯಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಬೋಧಿವೃಕ್ಷಕ್ಕೆ ನೀರೆರೆಯುವ ಹಾಗೂ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಜನರಿಂದ-ಜನರಿಗಾಗಿ-ಜನರಿಗೋಸ್ಕರ ಇರುವ ವ್ಯವಸ್ಥೆಯೇ ಪ್ರಜಾಪ್ರಭುತ್ವ ವ್ಯವಸ್ಥೆ, ಇಲ್ಲಿ ಪ್ರಜೆಗಳು ಪ್ರಭುಗಳಾಗಿದ್ದು, ಪ್ರಶ್ನಿಸುವ ಹಕ್ಕನ್ನು ಹೊಂದಿರುತ್ತಾರೆ. ಡಾ. ಅಂಬೇಡ್ಕರ್ ನಮ್ಮ ದೇಶಕ್ಕೆ ಬೃಹತ್ ಸಂವಿಧಾನ ಕೊಡುಗೆಯಾಗಿ ನೀಡಿದ್ದಾರೆ. ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಹಾಗೂ ಹಕ್ಕುಗಳನ್ನು ಗೌರವಿಸಿ, ಸಂವಿಧಾನದ ಆಶಯಗಳನ್ನು ಪಾಲಿಸಬೇಕು. ಮನುಷ್ಯ ಹುಟ್ಟಿನಿಂದಾಗಿ ಸಾವಿನವರೆಗೂ ಹಾಗೂ ತಮ್ಮ ಜೀವಿತದ ಪ್ರತಿಯೊಂದು ಹಂತದಲ್ಲೂ ಸಂವಿಧಾನವನ್ನು ಪಾಲಿಸಿ, ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.
ನಮ್ಮ ಪ್ರಜಾಪ್ರಭುತ್ವ ಸರ್ಕಾರದ ಮೂರು ಆಧಾರಸ್ತಂಭಗಳಾದ ಶಾಸಕಾಂಗ ಕಾನೂನು ರಚನೆ ಮಾಡಲಿದ್ದು, ಕಾರ್ಯಾಂಗ ಶಾಸಕಾಂಗ ರೂಪಿಸಿದ ಕಾನೂನುಗಳನ್ನು ಅನುಷ್ಠಾನ ತರಲಿದೆ. ನ್ಯಾಯಾಂಗ ಶಾಸಕಾಂಗ ಹಾಗೂ ಕಾರ್ಯಾಂಗದ ಕಾರ್ಯಗಳಲ್ಲಾದ ವಿವಾದಗಳನ್ನು ಬಗೆಹರಿಸಿ ಸಂವಿಧಾನವನ್ನು ರಕ್ಷಣೆ ಮಾಡಲಿದೆ. ನಾಲ್ಕನೇ ಆಧಾರಸ್ತಂಭವಾದ ಪತ್ರಿಕಾರಂಗ ಸಮಾಜದಲ್ಲಾಗುವ ತಪ್ಪುಗಳನ್ನು ತಿದ್ದುವ ಹಾಗೂ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತದೆ ಎಂದರು.ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಬದುಕಬೇಕು ಹಾಗೂ ಸಂವಿಧಾನವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರಿಕನ ಜವಾಬ್ದಾರಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ದೇಶದ ಅಭಿವೃದ್ಧಿ, ಶಾಂತಿ ಮತ್ತು ನೆಮ್ಮದಿಗಾಗಿ ವಿದ್ಯಾರ್ಥಿಗಳು ವಿದ್ಯಾವಂತರಾಗಿ, ಜ್ಞಾನವಂತರಾಗಿ ಹಾಗೂ ಪ್ರಜ್ಞಾವಂತ ನಾಗರೀಕರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಚ್.ಎಸ್.ಕುಮಾರ್ ಸಂವಿಧಾನ ಪೀಠಿಕೆ ಬೋಧಿಸಿದರು. ನಿವೃತ್ತ ಶಿಕ್ಷಕ ನಾರಾಯಣಪ್ಪ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಕುರಿತು ಉಪನ್ಯಾಸ ನೀಡಿದರು.ಜಿಲ್ಲಾ ಗ್ಯಾರಂಟಿ ಯೋಜನಾ ಅನುದಾನ ಸಮಿತಿ ಅಧ್ಯಕ್ಷ ಕೆ. ರಾಜು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ. ಕೆಂಪಯ್ಯ, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್, ಎಸ್ಪಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣ, ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಪಂ ಉಪಕಾರ್ಯದರ್ಶಿ ಧನರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
15ಕೆಆರ್ ಎಂಎನ್ 2.ಜೆಪಿಜಿರಾಮನಗರದ ಜಿಪಂ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣ ಉದ್ಘಾಟಿಸಿದರು.