ಭಾರತ ವಿಶ್ವಕಪ್ ಕ್ರಿಕೆಟ್ ಗೆಲ್ಲಲಿದೆ -ಅಜರುದ್ದೀನ್
KannadaprabhaNewsNetwork | Published : Oct 18 2023, 01:00 AM IST
ಭಾರತ ವಿಶ್ವಕಪ್ ಕ್ರಿಕೆಟ್ ಗೆಲ್ಲಲಿದೆ -ಅಜರುದ್ದೀನ್
ಸಾರಾಂಶ
ಸದ್ಯ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟ್ರೋಫಿಯನ್ನು ಭಾರತವೇ ಗೆಲ್ಲಲಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ ಅಜರುದ್ದೀನ್ ವಿಶ್ವಾಸ ವ್ಯಕ್ತಪಡಿಸಿದರು.
ಭಾರತ ವಿಶ್ವಕಪ್ ಕ್ರಿಕೆಟ್ ಗೆಲ್ಲಲಿದೆ -ಅಜರುದ್ದೀನ್ ಕನ್ನಡಪ್ರಭ ವಾರ್ತೆ ಧಾರವಾಡ ಸದ್ಯ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟ್ರೋಫಿಯನ್ನು ಭಾರತವೇ ಗೆಲ್ಲಲಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ ಅಜರುದ್ದೀನ್ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಕ್ರಿಕೆಟ್ ತಂಡಕ್ಕೆ ಉತ್ತಮ ನಾಯಕರಿದ್ದಾರೆ. ಬೌಲಿಂಗ್, ಬ್ಯಾಟಿಂಗ್‌ನಲ್ಲಿ ಪ್ರತಿಯೊಬ್ಬರ ಆಟವೂ ಚೆನ್ನಾಗಿದೆ. ಹೀಗಾಗಿ ಭಾರತ ತಂಡ ವಿಶ್ವಕಪ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದರು. ಅಹ್ಮದಾಬಾದ್ ಪಂದ್ಯದ ಸಂದರ್ಭದಲ್ಲಿ ಪಾಕ್ ಆಟಗಾರರು ಔಟಾಗಿ ಪೆವಿಲಿಯನ್‌ಗೆ ಹೋಗುವಾಗ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ವಿಡಿಯೋ ಕುರಿತು, ನಾನು ಈ ರೀತಿಯ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.