ಸಂವಿಧಾನದ ಅಡಿಯಲ್ಲಿ ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಗಟ್ಟಿಯಾದ ಲಿಖಿತ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನವಾಗಿದೆ.

ಅಂತಾರಾಷ್ಟ್ರೀಯ ಸಂವಿಧಾನದ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಸಕ

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ

ಸಂವಿಧಾನದ ಅಡಿಯಲ್ಲಿ ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಗಟ್ಟಿಯಾದ ಲಿಖಿತ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಮಂಗಳವಾರ ಪಟ್ಟಣದ ಉಮಾ ವಿದ್ಯಾಲಯದ ಪಪೂ ಕಾಲೇಜು ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಸಂವಿಧಾನದ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂವಿಧಾನವೇ ನಮಗೆ ಶಕ್ತಿಯಾಗಿದೆ. ಸಂವಿಧಾನದ ಅಡಿಯಲ್ಲಿ ನಾವು ಜೀವನ ಸಾಗಿಸಬೇಕಾಗಿದೆ. ಡಾ. ಬಾಬಾ ಸಾಹೇಬ ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ನಾವು ನಮ್ಮ ಹಕ್ಕು ಮತ್ತು ಕರ್ತವ್ಯವನ್ನು ಸಾಗಿಸಬೇಕಿದೆ. ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಹಾಗೂ ನಾಲ್ಕನೇ ಅಂಗವಾಗಿ ಪತ್ರಿಕಾರಂಗ ಕಾರ್ಯನಿರ್ವಹಿಸುವ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕಿದೆ. ಸಂವಿಧಾನದ ಜಾರಿಗೆ ಬಂದ ದಿನದಿಂದ ನಾವು ಈ ದೇಶದ ಹೆಮ್ಮೆಯ ಪ್ರಜೆಗಳಾಗಿದ್ದೇವೆ‌ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ. ಸಂವಿಧಾನದ ಬಗ್ಗೆ ಎಲ್ಲಾ ಮಾಹಿತಿಯನ್ನು ವಿದ್ಯಾರ್ಥಿಗಳು ಅರಿತಿರಬೇಕಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಮಾಹಿತಿ ಅರಿತಿರಬೇಕು. ಶಾಸಕಾಂಗ ಸಭೆಯಲ್ಲಿ ನಡೆಯುವ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ವೇಳೆ ಲಕ್ಷ್ಮೇಶ್ವರ ತಾಲೂಕಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ನಾಗರಾಜ ಮಡಿವಾಳರ, ತಹಸೀಲ್ದಾರ್ ಧನಂಜಯ ಎಂ., ತಾಪಂ ಅಧಿಕಾರಿ ನಾಗರತ್ನ ನಾಯ್ಕರ್, ಸಿಪಿಐ ಬಿ.ವಿ. ನ್ಯಾಮಗೌಡ, ಸಮಾಜ ಕಲ್ಯಾಣಾಧಿಕಾರಿ ಗೋಪಾಲ ಲಮಾಣಿ, ಉಪನ್ಯಾಸಕ ಬಿ.ಎಸ್. ಬಾಳೇಶ್ವರಮಠ. ರಮೇಶ ಹಂಗನಕಟ್ಟಿ, ಟಿ.ಕೆ. ರಾಠೋಡ, ಇಸಿಓ ರಾಘವೇಂದ್ರ ಜೋಶಿ, ಪ್ರಾಚಾರ್ಯ ಕಳ್ಳಿಮನಿ ಇದ್ದರು. ಶಿಕ್ಷಕ ಫಕ್ಕೀರೇಶ ಚಕಾರದ ನಿರೂಪಿಸಿದರು.