ಭಾರತೀಯ ಸಂಸ್ಕೃತಿ ಪ್ರಾಚೀನ ಸಂಸ್ಕೃತಿ: ನಾಗೇಶ

| Published : May 20 2024, 01:40 AM IST

ಸಾರಾಂಶ

ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಮೂಲಕ ಸಮಾಜದ ಪರಿವರ್ತನೆಗೆ ಪ್ರಯತ್ನಿಸಬೇಕು

ನರಸಿಂಹರಾಜಪುರ: ಭಾರತೀಯ ಸಂಸ್ಕೃತಿಯು ಅತ್ಯಂತ ಪ್ರಾಚೀನ ಸಂಸ್ಕೃತಿಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಿ.ನಾಗೇಶಗೌಡ ಹೇಳಿದರು.

ಶನಿವಾರ ಸಂಜೆ ತಾಲೂಕಿನ ಹೊನ್ನೆಕೂಡಿಗೆ ಗ್ರಾಮದಲ್ಲಿ ಆಯೋಜಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರದಲ್ಲಿ ಭಾರತೀಯ ಸಂಸ್ಕೃತಿ ಪರಂಪರೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ, ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಮೂಲಕ ಸಮಾಜದ ಪರಿವರ್ತನೆಗೆ ಪ್ರಯತ್ನಿಸಬೇಕು ಎಂದರು.

ಶಿಕ್ಷಕ ಪ್ರಸನ್ನ ಸ್ಪರ್ಧಾತ್ಮಕ ಪರೀಕ್ಷೆ ಸವಾಲುಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ, ವಿದ್ಯಾರ್ಥಿಗಳು ಪ್ರತಿನಿತ್ಯ ಹೊಸತನ್ನ ಕಲಿಯುವತ್ತ ಆಸಕ್ತಿ ಬೆಳೆಸಿಕೊಳ್ಳಬೇಕು. ನಿರಂತರ ಪ್ರಯತ್ನದಿಂದ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಹೊನ್ನೆಕೂಡಿಗೆ ಪ್ರಗತಿ ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಲಕ್ಷ್ಮೀದೇವಿವಹಿಸಿದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಿ.ಎಸ್.ಸುಬ್ರಹ್ಮಣ್ಯ, ಸಹಾಯಕ ಪ್ರಾಧ್ಯಾಪಕಿ ಬಿ.ಟಿ.ರೂಪ, ಶಾಲಾಭಿವೃದ್ಧಿ ಸಮಿತಿ ಹರ್ಷಿತ, ಗ್ರಾಮಸ್ಥರಾದ ಅನುಪ್ ಉಪಸ್ಥಿತರಿದ್ದರು. ನಂತರ ನಿಷ್ಮಾ ಜೈನ್ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,ವಿಶೇಷ ವಾರ್ಷಿಕ ಶಿಬಿರದಲ್ಲಿ ಸಹಾಯಕ ಪ್ರಾಧ್ಯಾಪಕ ವಿ.ಸತೀಶ್ ಮಾನಸಿಕ ಸಾಮರ್ಥ್ಯದ ಬಗ್ಗೆ ಉಪನ್ಯಾಸ ನೀಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆ ಎದುರಿಸಬೇಕಾದರೆ ಹೆಚ್ಚಿನ ಓದು ಅವಶ್ಯಕ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾನಸಿಕ ಸಾಮರ್ಥ್ಯದ ಪರೀಕ್ಷೆಗಳು ಹೇಗಿರುತ್ತವೆ ಎಂಬ ಬಗ್ಗೆ ವಿವರಿಸಿದ ಅವರು, ಅವುಗಳನ್ನು ಬಗೆಹರಿಸುವುದು ಹೇಗೆ? ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.