ಭಾರತೀಯ ಸಂಸ್ಕೃತಿಯು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠತೆ ಪಡೆದ ಸಂಸ್ಕೃತಿಯಾಗಿದೆ. ಇಂತಹ ಪವಿತ್ರ ಸಂಸ್ಕೃತಿ ಮತ್ತು ಸಂಸ್ಕಾರವನ್ನು ನಾವಿಂದು ನಮ್ಮ ಮಕ್ಕಳಿಗೆ ರೂಢಿಸಬೇಕಿದೆ ಎಂದು ಜಂಗಮವಾಡಿಮಠ ವಾರಣಾಸಿ ಕಾಶೀ ಮಹಾಪೀಠದ ಜ.ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.

ಗದಗ: ಭಾರತೀಯ ಸಂಸ್ಕೃತಿಯು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠತೆ ಪಡೆದ ಸಂಸ್ಕೃತಿಯಾಗಿದೆ. ಇಂತಹ ಪವಿತ್ರ ಸಂಸ್ಕೃತಿ ಮತ್ತು ಸಂಸ್ಕಾರವನ್ನು ನಾವಿಂದು ನಮ್ಮ ಮಕ್ಕಳಿಗೆ ರೂಢಿಸಬೇಕಿದೆ ಎಂದು ಜಂಗಮವಾಡಿಮಠ ವಾರಣಾಸಿ ಕಾಶಿ ಮಹಾಪೀಠದ ಜ.ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.ನಗರದ ಗಾಣಿಗ ಭವನದಲ್ಲಿ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ಏರ್ಪಡಿಸಿರುವ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಮಾಲಿಕೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.ಸನಾತನ ಸಂಸ್ಕೃತಿ ಮತ್ತು ಪರಂಪರೆಗೆ ತನ್ನದೇ ಆದ ಹಿರಿಮೆ ಗರಿಮೆ ಇದೆ ಋಷಿ ಮುನಿಗಳು, ದಾರ್ಶನಿಕರು ಇದಕ್ಕೆ ಭದ್ರ ಬುನಾದಿ ಒದಗಿಸಿದ್ದಾರೆ. ಮನುಕುಲದ ಒಳತಿಗಾಗಿ ಇರುವ ಈ ಸಂಸ್ಕೃತಿ ಮತ್ತು ಸಂಸ್ಕಾರವನ್ನು ನಮ್ಮ ಬದುಕನ್ನು ಹಸನಾಗಿಸಿಕೊಳ್ಳಲು ಪರಿಪಾಲಿಸುವುದು ಅವಶ್ಯ ಎಂದರು.ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು. ನೇತೃತ್ವ ವಹಿಸಿದ್ದ ಮಲ್ಲಸಮುದ್ರಗಿರಿಯ ಓಂಕಾರೇಶ್ವರಮಠದ ಫಕೀರೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ಎಂ.ಜಿ. ಸಂತೋಜಿ ಮಾತನಾಡಿದರು. ಉಡನಕಲ್ಲ ಸರ್ಕಾರಿ ಪ್ರೌಢ ಶಾಲೆಯ ಸಂಗೀತ ಶಿಕ್ಷಕ ವೀರಭದ್ರಪ್ಪ ಹಿರೆಬೆನಕಲ್ ಅವರಿಗೆ ದಿವ್ಯಾಂಗ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಚಳಗೇರಿ ಹಿರೇಮಠ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು. ಅಕ್ಕಮ್ಮ ಗುರುಸ್ವಾಮಿಮಠ ಪ್ರಾರ್ಥಿಸಿದರು. ಗುರುಸಿದ್ಧಯ್ಯ ಹಿರೇಮಠ ಸ್ವಾಗತಿಸಿದರು. ವಿ.ಕೆ. ಗುರುಮಠ ನಿರೂಪಿಸಿ, ವಂದಿಸಿದರು.