ಭಾರತೀಯ ಗುರು ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ

| Published : Jun 20 2025, 12:34 AM IST / Updated: Jun 20 2025, 12:35 AM IST

ಭಾರತೀಯ ಗುರು ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಣದ ವಸ್ತುಗಳನ್ನು ಕಾಣಲು ಗುರು ಮಾರ್ಗದರ್ಶನ ನೀಡುತ್ತಾನೆ. ಹೀಗಾಗಿ ತಾಯಿ, ತಂದೆ, ಗುರುವಿನ ಋಣ ತೀರಿಸಲು ಸಾಧ್ಯವಿಲ್ಲ.

ಶಿಗ್ಗಾಂವಿ: ಭಾರತೀಯ ಗುರು ಪರಂಪರೆ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಭಾರತೀಯರಲ್ಲಿರುವ ಸಮನ್ವಯಿ ಮನೋಭಾವನೆ ಅದಕ್ಕೆ ಕಾರಣವಾಗಿದೆ. ಹೀಗಾಗಿ ಗುರು ಪರಂಪರ ಸರ್ವಶ್ರೇಷ್ಠವಾಗಿ ನಿಲ್ಲುತ್ತದೆ ಎಂದು ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಕನಕನಬಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ನಡೆದ ಉಜ್ಜಯಿನಿ, ಶ್ರೀಶೈಲ ಹಾಗೂ ಕಾಶೀ ಪೀಠದ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವದ ಆನಂತರ ನಡೆದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕಾಣದ ವಸ್ತುಗಳನ್ನು ಕಾಣಲು ಗುರು ಮಾರ್ಗದರ್ಶನ ನೀಡುತ್ತಾನೆ. ಹೀಗಾಗಿ ತಾಯಿ, ತಂದೆ, ಗುರುವಿನ ಋಣ ತೀರಿಸಲು ಸಾಧ್ಯವಿಲ್ಲ. ಆದರೆ ಮನುಷ್ಯ ಚಿಕ್ಕವನಿದ್ದವನು ದೊಡ್ಡವನಾಗುವನು, ಸಾಮಾನ್ಯ ಅಸಾಮಾನ್ಯನಾಗಲು ಸಾಧ್ಯವಿದೆ ಎಂಬುದಕ್ಕೆ ಇಂದಿನ ಸೇವಾ ಕಾರ್ಯಕ್ರಮದ ಉಸ್ತುವಾರಿ ವಿ.ಸಿ. ಪಾಟೀಲ ಅವರ ಸೇವೆ ಸಾಕ್ಷಿಯಾಗಿದೆ ಎಂದರು.

ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಿದೆ ಎಂದರು.

ಕಾಶೀ ಪೀಠದ ಕಿರಿಯ ಶ್ರೀ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಬಂಕಾಪುರ ಅರಳೆಲೆ ಮಠದ ರೇವಣಸಿದ್ದೇಶ್ವರ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿದರು. ಹಿರೇಮಣಕಟ್ಟಿ ವಿಶ್ವಾರಾಧ್ಯ ಸ್ವಾಮೀಜಿ, ಹೋತನಹಳ್ಳಿ ಶಂಭುಲಿಂಗ ಸ್ವಾಮೀಜಿ, ಹಿರೇಬೆಂಡಿಗೇರಿ ವಿಶ್ವೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು.ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ರಾಣಿಬೆನ್ನೂರು: ನಗರದ ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಕಾಲೇಜಿನ ಆವರಣದಲ್ಲಿ ಪತಂಜಲಿ ಯೋಗ ಪೀಠ, ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮ, ಕಾಕಿ ಜನಸೇವಾ ಸಂಸ್ಥೆ, ಗಾಯತ್ರಿ ಕೋಮಲಾಚಾರ್ ಯೋಗ ತರಬೇತಿ ಸಂಸ್ಥೆ ಹಾಗೂ ಕೆಎಲ್‌ಇ ಸಂಸ್ಥೆಯ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಜೂ. 21ರಂದು ಬೆಳಗ್ಗೆ 5.30ಕ್ಕೆ ಮಹಿಳಾ ಸಬಲೀಬರಣಕ್ಕಾಗಿ ಯೋಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಗಾಯತ್ರಿ ಕೋಮಲಾಚಾರ್ ಯೋಗ ತರಬೇತಿ ಸಂಸ್ಥೆಯ ಕೆ.ಸಿ. ಕೋಮಲಾಚಾರ್ ತಿಳಿಸಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಪ್ರಕಾಶಾನಂದಜಿ ಮಹಾರಾಜ್, ಮುಂಬಯಿ ರಾಮಕೃಷ್ಣ ಮಿಶನ್‌ದ ದಯಾಧಿಪಾನಂದಜಿ ಮಹಾರಾಜ್ ಸಾನ್ನಿಧ್ಯ ವಹಿಸುವರು. ಶಾಸಕ ಪ್ರಕಾಶ ಕೋಳಿವಾಡ ಉದ್ಘಾಟಿಸುವರು.

ಬ್ರಹ್ಮಕುಮಾರ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಮಾಲತಿ ಅಕ್ಕ, ತಹಸೀಲ್ದಾರ್ ಆರ್.ಎಚ್. ಭಾಗವಾನ, ಡಿವೈಎಸ್‌ಪಿ ಜೆ. ಲೋಕೇಶ, ಬಿಇಒ ಶಾಮಸುಂದರ ಅಡಿಗ, ಕೆಎಲ್‌ಇ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ವಿ.ಪಿ. ಲಿಂಗನಗೌಡ್ರ, ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.

ಪತಂಜಲಿ ಯೋಗ ಸಮಿತಿ ಪ್ರಭಾರಿ ರವೀಂದ್ರ ವಿಜಾಪುರ, ಯೋಗ ಶಿಕ್ಷಕ ಆರ್.ಬಿ. ಪಾಟೀಲ, ರಾಮಸಿಂಗ್ ರಾಠೋಡ, ಗಿರಿಜಾ ಸಾಳೇರ, ಸರೋಜಾ ಸುಣಗಾರ ಸುದ್ದಿಗೋಷ್ಠಿಯಲ್ಲಿದ್ದರು.