ಭಾರತದ ಸಂವಿಧಾನ ವಿಶ್ವದಲ್ಲಿ ಶ್ರೇಷ್ಠವಾಗಿದೆ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ

| Published : Feb 24 2024, 02:35 AM IST

ಭಾರತದ ಸಂವಿಧಾನ ವಿಶ್ವದಲ್ಲಿ ಶ್ರೇಷ್ಠವಾಗಿದೆ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ
Share this Article
  • FB
  • TW
  • Linkdin
  • Email

ಸಾರಾಂಶ

ಡಾ ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ನೀಡಿರುವ ಸಂವಿಧಾನ ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಶಂಕರ್ ಎಚ್.ಎಸ್. ಅಭಿಪ್ರಾಯಪಟ್ಟರು. ಹೊಳೆನರಸೀಪುರದ ದೊಡ್ಡಕಾಡನೂರು ಗ್ರಾಮದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂವಿಧಾನ ರಥವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಶಂಕರ । ಸಂವಿಧಾನ ರಥಕ್ಕೆ ಅದ್ಧೂರಿ ಸ್ವಾಗತ ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಡಾ ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ನೀಡಿರುವ ಸಂವಿಧಾನ ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಶಂಕರ್ ಎಚ್.ಎಸ್. ಅಭಿಪ್ರಾಯಪಟ್ಟರು.

ತಾಲೂಕಿನ ದೊಡ್ಡಕಾಡನೂರು ಗ್ರಾಮದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂವಿಧಾನ ರಥವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ, ಪಟಾಕಿ ಸಿಡಿಸಿ ಅತ್ಯಂತ ಅದ್ಧೂರಿಯಾಗಿ ಸ್ವಾಗತಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತದಲ್ಲಿದ್ದ ವರ್ಣ ವ್ಯವಸ್ಥೆಯನ್ನು ಹೋಗಲಾಡಿಸಲು ಅಂಬೇಡ್ಕರ್ ಸಂವಿಧಾನದ ಮೂಲಕ ಕಾನೂನುಗಳನ್ನು ರೂಪಿಸಿದ್ದಾರೆ. ಅದರ ಫಲವಾಗಿ ಇಂದು ಒಬ್ಬ ಸಾಮಾನ್ಯ ಪ್ರಜೆಯೂ ಮತದಾನ ಮಾಡುವ ಹಕ್ಕನ್ನು ಪಡೆದುಕೊಂಡಿದ್ದಾನೆ. ಕನಿಷ್ಠ ವ್ಯಕ್ತಿಯು ಗರಿಷ್ಠ ಸ್ಥಾನವನ್ನು ಅಲಂಕರಿಸಲು ಸಾಧ್ಯವಾಗಿದೆ. ಭಾರತದ ಸಂವಿಧಾನವನ್ನು ರಚನೆ ಮಾಡಬೇಕಾದರೆ, ಅಂಬೇಡ್ಕರ್ ಸುಮಾರು ೨ ವರ್ಷ ೧೧ ತಿಂಗಳು ೧೭ ದಿನಗಳು ಪ್ರತಿದಿನಕ್ಕೆ ೨೧ ಗಂಟೆಗಳ ಕಾಲ ಶ್ರಮಿಸಿದ್ದಾರೆ. ವಿಶ್ವದ ಅನೇಕ ಸಂವಿಧಾನ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿ, ಭಾರತದ ಬಹು ಸಂಸ್ಕೃತಿಗೆ ಹೊಂದಾಣಿಕೆಯಾಗುವ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಆ ಕಾರಣಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿಶ್ವದಲ್ಲಿ ಪ್ರತಿ ನಿಮಿಷದಲ್ಲಿಯೂ ಸ್ಮರಣೆ ಮಾಡಿಕೊಳ್ಳುತ್ತಿದ್ದಾರೆ. ಸಂವಿಧಾನದಲ್ಲಿ ನೀಡಿರುವ ಎಲ್ಲಾ ಹಕ್ಕುಗಳನ್ನು ಬಳಸಿಕೊಂಡು, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು ಎಂದು ತಿಳಿಸಿದರು.

ಜೆಎಸ್ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಚೌಡಯ್ಯ ಕಟ್ನವಾಡಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸಹ ಶಿಕ್ಷಕಿ ಮಮತ ಸಂವಿಧಾನ ಪೀಠಿಕೆ ವಾಚನ ಮಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಣ್ಣ ಬಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಅರುಣ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-೨ ಸಹಾಯಕ ನಿರ್ದೇಶಕ ಕೌಸರ್ ಅಹಮದ್, ಬಿಸಿಎಂ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಟಿ.ಡಿ. ಜ್ಯೋತಿ, ಡಿಎಸ್ಎಸ್ ರಾಜ್ಯಸಂಚಾಲಕ ಎಂ.ಸೋಮಶೇಖರ್, ಗ್ರಾಮ ಪಂಚಾಯಿತಿ ಪಿಡಿಒ ಶಿವಣ್ಣ, ಮಾಜಿ ಅಧ್ಯಕ್ಷೆ ಶಿವಮ್ಮ ಹಾಗೂ ಗ್ರಾಪಂ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಸ್ಕಾರ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಪ್ರೇಮಕುಮಾರ್ ಸ್ವಾಗತ ಮಾಡಿದರು. ಮುಖ್ಯ ಶಿಕ್ಷಕ ಮಹೇಶಪ್ಪ ಡಿ.ಸಿ. ವಂದಿಸಿದರು. ಸಹ ಶಿಕ್ಷಕಿ ಅನುರಾಧ ನಿರೂಪಣೆ ಮಾಡಿದರು

ಸಂವಿಧಾನ ಜಾಥಾವನ್ನು ವೀರಗಾಸೆ, ಕಳಸ ಮತ್ತು ಬ್ಯಾಂಡ್ ಸೆಟ್ ವ್ಯವಸ್ಥೆಯೊಂದಿಗೆ ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ನೌಕರರು, ಪೋಲಿಸ್ ಇಲಾಖೆ, ವಿದ್ಯತ್ ಇಲಾಖೆ ಮತ್ತಿತರರು ಭಾಗವಹಿಸಿದ್ದರು. ಹೊಳೆನರಸೀಪುರ ತಾಲೂಕಿನ ದೊಡ್ಡ ಕಾಡನೂರು ಗ್ರಾಮದಲ್ಲಿ ಸಂವಿಧಾನ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಪುಷ್ಪಾರ್ಚನೆ ಮಾಡಲಾಯಿತು.