ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಬಲಿಷ್ಠ: ಕೃಷ್ಣಪ್ಪ ಧರ್ಮರ

| Published : Sep 16 2025, 12:03 AM IST

ಸಾರಾಂಶ

ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಪ್ರಜಾಪ್ರಭುತ್ವ ಪೀಠಿಕೆ ಓದುವ ಮೂಲಕ ಪ್ರಮಾಣವಚನ ಸ್ವೀಕರಿಸಿದರು.

ಲಕ್ಷ್ಮೇಶ್ವರ: ಜಗತ್ತಿನಲ್ಲಿಯೇ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಹಳ ದೊಡ್ಡದು ಹಾಗೂ ಅಷ್ಟೇ ಬಲಿಷ್ಠವಾಗಿದೆ. ಹೀಗಾಗಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಗತ್ತಿನ ಇತರ ರಾಷ್ಟ್ರಗಳು ಅನುಸರಿಸುತ್ತಿವೆ ಎಂದು ತಾಪಂ ಇಒ ಕೃಷ್ಣಪ್ಪ ಧರ್ಮರ ಹೇಳಿದರು.

ಸೋಮವಾರ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಡೀ ದೇಶದ ಜನತೆ ಒಪ್ಪಿಕೊಂಡಿರುವ ಸಂವಿಧಾನದ ಪ್ರಕಾರ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಜೆಗಳಿಗೆ ಹೆಚ್ಚಿನ ಮನ್ನಣೆ ಇದೆ. ಇದನ್ನೇ ಸಂವಿಧಾನ ಒತ್ತಿ ಹೇಳುತ್ತದೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆಯನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಬಿಂಬಿಸುತ್ತದೆ. ಕಾರಣ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ಈ ವೇಳೆ ತಹಸೀಲ್ದಾರ್‌ ಎಂ. ಧನಂಜಯ, ಜಿಪಂ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ, ಫಕ್ಕೀರೇಶ ಭಜಕ್ಕನವರ ಮಾತನಾಡಿದರು. ಈಶ್ವರ ಮೆಡ್ಲೇರಿ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ಮುತ್ತಣ್ಣ ಸಂಕನೂರ, ವಾರ್ಡನ್ ಬಿ.ಎಸ್. ಹಡಪದ, ಕೆ.ಎಫ್. ತಳವಾರ, ಫಕ್ಕೀರೇಶ ನಂದೆಣ್ಣವರ, ಅನಿಲ ಮುಳಗುಂದ, ಅಂಬರೀಶ ತೆಂಬದಮನಿ, ತಾಲೂಕು ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ ಕಚೇರಿ ಸಿಬ್ಬಂದಿ ಇದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಪ್ರಜಾಪ್ರಭುತ್ವ ಪೀಠಿಕೆ ಓದುವ ಮೂಲಕ ಪ್ರಮಾಣವಚನ ಸ್ವೀಕರಿಸಿದರು.