ಸಾರಾಂಶ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಂಜನಾದ್ರಿಯ ಆಂಜನೇಯಸ್ವಾಮಿಗೆ ದೇಶ ವಿದೇಶದಿಂದ ತಂದಿರುವ ಹೂವುಗಳನ್ನು ಅಲಂಕಾರ ಮಾಡಲಾಗುತ್ತದೆ.
ಗಂಗಾವತಿ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದ್ದರಿಂದ ಭಾರತೀಯರ ಕನಸು ನನಸಾಗಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಂತಸ ವ್ಯಕ್ತ ಪಡಿಸಿದರು.
ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಜ.22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಅಂಜನಾದ್ರಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ರೂಪುರೇಷೆಗಳನ್ನು ವೀಕ್ಷಿಸುವ ಪೂರ್ವದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಂಜನಾದ್ರಿಯ ಆಂಜನೇಯಸ್ವಾಮಿಗೆ ದೇಶ ವಿದೇಶದಿಂದ ತಂದಿರುವ ಹೂವುಗಳನ್ನು ಅಲಂಕಾರ ಮಾಡಲಾಗುತ್ತದೆ. ರವಿಶಂಕರ ಗುರೂಜಿ ಅವರಿಂದ ಸತ್ಸಂಗ ಕಾರ್ಯಕ್ರಮ ಜರುಗುತ್ತದೆ ಎಂದರು. ಸಂಜೆ 5 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿದ್ದು, ಬೆಳಿಗ್ಗೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಭಕ್ತರು ನೇರವಾಗಿ ಎಲ್‌ಇಡಿ ಸ್ಕ್ರೀನ್ ಮೂಲಕ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ. 10 ರಿಂದ 15 ಸಾವಿರ ಭಕ್ತರಿಗೆ ಪ್ರಸಾದ ವಿತರಣೆಗೆ ಸಿದ್ಧತೆ ಮಾಡಲಾಗಿದೆ. ರಾಜ್ಯ ಸರ್ಕಾರ ಅರ್ಧ ದಿನವಾದರೂ ರಜೆ ಘೋಷಿಸಬೇಕೆಂದು ಒತ್ತಾಯಿಸಿದರು.
₹50 ಕೋಟಿ ವೆಚ್ಚದಲ್ಲಿ ಗಂಗಾವತಿಯ ಆನೆಗೊಂದಿ ಡಬಲ್ ರಸ್ತೆ ನಿರ್ಮಾಣಕ್ಕೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಿಗಿತ್ತಿ, ತಹಸೀಲ್ದಾರ ನಾಗರಾಜ್ ಇದ್ದರು.