ಇಂಡಿಗನತ್ತದ ಘಟನೆ ಉದ್ದೇಶ ಪೂರ್ವಕವಲ್ಲ: ವೆಂಕಟೇಶ್‌

| Published : Apr 29 2024, 01:37 AM IST

ಇಂಡಿಗನತ್ತದ ಘಟನೆ ಉದ್ದೇಶ ಪೂರ್ವಕವಲ್ಲ: ವೆಂಕಟೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ಇಂಡಿಗನತ್ತ ಗ್ರಾಮಸ್ಥರು ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ಆದರೆ ಗ್ರಾಮದಲ್ಲಿ ನಡೆದ ಘಟನೆ ಉದ್ದೇಶಪೂರ್ವಕವಾಗಿ ನಡೆದಿಲ್ಲ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಜನದ್ವನಿ ಬಿ. ವೆಂಕಟೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಮಲೆಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ, ಮೆಂದಾರೆ, ತುಳಸಿಕೆರೆ, ತೆಂಕಾಣೆ, ಪಡಸಲನತ್ತ ಗ್ರಾಮಸ್ಥರು ಕುಡಿಯುವ ನೀರು, ರಸ್ತೆ, ವಿದ್ಯುತ್, ಶಿಕ್ಷಣ, ಆರೋಗ್ಯಕ್ಕಾಗಿ ಪ್ರತಿಭಟಿಸುತ್ತಲೇ ಬಂದಿದ್ದಾರೆ. ಆದರೂ ಸರ್ಕಾರಗಳು ಸೌಕರ್ಯ ಕಲ್ಪಿಸದೆ ಇರುವುದರಿಂದ ಒಂದು ತಿಂಗಳ ಹಿಂದೆಯೆ ಲೋಕಸಭೆ ಚುನಾವಣಾ ಬಹಿಷ್ಕಾರ ಮಾಡಿದ್ದರು. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ಗ್ರಾಮಸ್ಥರನ್ನು ಮನವೊಲಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ದರಿಂದ ಗ್ರಾಮಸ್ಥರು ಮತಗಟ್ಟೆಗೆ ತೆರಳಿ ಮತ ಯಂತ್ರಗಳನ್ನು ದ್ವಂಸ ಮಾಡಿದ್ದಾರೆ. ಇದು ವಿಷಾದನೀಯ ಸಂಗತಿ. ಮುಂದಿನ ದಿನಗಳಲ್ಲಾದರೂ ಕಾಡಂಚಿನ ಗ್ರಾಮಗಳ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.ಗ್ರಾಮಸ್ಥರ ಬೆಂಬಲಕ್ಕೆ ನಾವಿದ್ದೇವೆ:

ಗ್ರಾಮದಲ್ಲಿ ನಡೆದಿರುವ ಗಲಾಟೆ ಉದ್ದೇಶಪೂರ್ವಕವಲ್ಲ. ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಾಗಿರುವುದರಿಂದ ಗ್ರಾಮಸ್ಥರ ಬೆಂಬಲಕ್ಕೆ ಬೆನ್ನೆಲುಬಾಗಿ ನಿಂತುಕೊಂಡು ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಿದಂತೆ ಸೂಕ್ತ ಕ್ರಮ ಕೈಗೊಂಡು, ನ್ಯಾಯಾಂಗ ಬಂಧನದಲ್ಲಿರುವ ಗ್ರಾಮಸ್ಥರನ್ನು ಜಾಮೀನಿನ ಮೂಲಕ ಹೊರ ಕರೆತರಲು ಹಿರಿಯ ವಕೀಲ ಶಶಿಬಿಂಬ ನೇತೃತ್ವದಲ್ಲಿ ನಾಲ್ಕು ವಕೀಲರನ್ನು ನೇಮಕ ಮಾಡಲಾಗಿದೆ. ಮೆಂದಾರೆ ಗ್ರಾಮದ ಆದಿವಾಸಿ ಜನಾಂಗದವರ ಮೇಲೆ ಹಲ್ಲೆ ಆಗಿರುವುದು ಖಂಡನೀಯ. ಈ ಸಮುದಾಯದ ಬೆಂಬಲಕ್ಕೆ ನಾವಿದ್ದೇವೆ ಎಂದರು.