ಬಜ್ಪೆ ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು.

ಮಂಗಳೂರು: ಬಜ್ಪೆ ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಂತೆ ಬಜ್ಪೆಯಲ್ಲಿ ನೂತನವಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಂಡಿದೆ. ಬಡವರು ಮತ್ತು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದಲ್ಲಿ, ಅಚ್ಚುಕಟ್ಟಾದ ಪರಿಸರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶ. ಬಜ್ಪೆಯ ಈ ಹೊಸ ಕ್ಯಾಂಟೀನ್ ಸಾರ್ವಜನಿಕ ಸೇವೆಗೆ ಲಭ್ಯವಿದ್ದು, ಹಸಿವು ಮುಕ್ತ ಸಮಾಜದತ್ತ ಕಾಂಗ್ರೆಸ್‌ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ಈ ಸಂದರ್ಭ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಹೀದ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಬಜ್ಪೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಲೋಕೇಶ್ ಪೂಜಾರಿ ಮತ್ತಿತರರು ಇದ್ದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.