ಸಾರಾಂಶ
ಪ್ರಸ್ತುತ ದುಬಾರಿ ದಿನಮಾನದಲ್ಲಿ ವಿದ್ಯಾರ್ಥಿಗಳಿಗೆ, ಕೂಲಿಕಾರ್ಮಿಕರಿಗೆ ಹಾಗೂ ಜನತೆಗೆ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನವಾಗಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಗಜೇಂದ್ರಗಡ: ಪ್ರಸ್ತುತ ದುಬಾರಿ ದಿನಮಾನದಲ್ಲಿ ವಿದ್ಯಾರ್ಥಿಗಳಿಗೆ, ಕೂಲಿಕಾರ್ಮಿಕರಿಗೆ ಹಾಗೂ ಜನತೆಗೆ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನವಾಗಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಬುಧವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಪಟ್ಟಣಕ್ಕೆ ಅವಶ್ಯಕವಾದ ಯೋಜನೆಯಾಗಿದೆ. ಎಲ್ಲವು ದುಬಾರಿ ಎನ್ನುವ ದಿನಗಳಲ್ಲಿ ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ. ಹೀಗಾಗಿ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲು ಈಗಾಗಲೇ ಸೂಚಿಸಲಾಗಿದೆ ಎಂದರು.ಮುಖಂಡರಾದ ಸಿದ್ದಪ್ಪ ಬಂಡಿ, ಶಿವರಾಜ ಘೋರ್ಪಡೆ ಮಾತನಾಡಿ, ಹಸಿವು ಮುಕ್ತ ಕರ್ನಾಟಕ ಯೋಜನೆ ಅಡಿ ತಾಲೂಕಿಗೆ ಒಂದರಂತೆ ಇಂದಿರಾ ಕ್ಯಾಂಟೀನ್ ಆರಂಭಿಸುವ ಆಶಯದಡಿ ಸಿಎಂ ಸಿದ್ದರಾಮಯ್ಯ ಅವರ ಯೋಜನೆ ಯಶಸ್ಸಿಗೆ ಪಟ್ಟಣದಲ್ಲಿ ಶಾಸಕ ಜಿ.ಎಸ್. ಪಾಟೀಲ ಜಾಗ ಗುರುತಿಸಿ ಸಕಾಲದಲ್ಲೇ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ್ದಾರೆ. ಇಂದು ಇಂದಿರಾ ಕ್ಯಾಂಟೀನ್ ಶಾಸಕರು ಉದ್ಘಾಟಿಸಿದ್ದು ಖುಷಿ ತಂದಿದೆ. ಪಟ್ಟಣಕ್ಕೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸುತ್ತಲಿನ ಗ್ರಾಮಗಳ ಜನಸಾಮಾನ್ಯರಿಗೆ, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್ ಗುಣಮಟ್ಟದ ಆಹಾರ ಸಿಗಲಿದೆ ಎಂದರು. ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ, ಉಪಾಧ್ಯಕ್ಷೆ ಸವಿತಾ ಬಿದರಳ್ಳಿ, ಸ್ಥಾಯಿ ಸಮಿತಿ ಚೇರ್ಮನ್ ಮುದಿಯಪ್ಪ ಮುಧೋಳ, ಪುರಸಭೆ ಸದಸ್ಯರಾದ ಮುರ್ತುಜಾ ಡಾಲಾಯತ್, ಲಕ್ಷ್ಮೀ ಮುಧೋಳ, ರಾಜು ಸಾಂಗ್ಲೀಕರ, ರಪೀಕ್ ತೋರಗಲ್, ಉಮೇಶ ರಾಠೋಡ ಹಾಗೂ ಅಶೋಕ ಬಾಗಮಾರ, ವೀರಣ್ಣ ಶೆಟ್ಟರ, ಎ.ಡಿ. ಕೋಲಕಾರ, ಅರ್ಜುನ ರಾಠೋಡ, ಶ್ರೀಧರ ಬಿದರಳ್ಳಿ, ಶರಣಪ್ಪ ಬೆಟಗೇರಿ, ಸಿದ್ದಪ್ಪ ಚೋಳಿನ, ಶಶಿಧರ ಹೂಗಾರ, ಮುತ್ತಣ್ಣ ತಳವಾರ, ಸುರೇಶ ಚವಡಿ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಶಿವಕುಮಾರ ಇಲಾಳ, ಉಮಾ ಕುರಹಟ್ಟಿ, ರಾಜು ನಿಶಾನದಾರ ಸೇರಿ ಇತರರು ಇದ್ದರು.