ಏರ್ಪೋರ್ಟಲ್ಲಿ ಇಂದಿರಾ ಕ್ಯಾಂಟೀನ್‌ ಶುರು: ಮುಖ್ಯಮಂತ್ರಿ ಸಿದ್ದರಾಮಯ್ಯ

| Published : Mar 12 2024, 02:04 AM IST

ಏರ್ಪೋರ್ಟಲ್ಲಿ ಇಂದಿರಾ ಕ್ಯಾಂಟೀನ್‌ ಶುರು: ಮುಖ್ಯಮಂತ್ರಿ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ/ದೇವನಹಳ್ಳಿ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರುಪಾಯಿ. ಮಧ್ಯಾಹ್ನ ಮತ್ತು ರಾತ್ರಿ ಊಟ 10 ರುಪಾಯಿಗಳಿಗೆ ದೊರೆಯಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂ ಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನಃ ಪ್ರಾರಂಭಿಸಿದ್ದೇವೆ ಎಂದರು.