ತರೀಕೆರೆಇಂದಿರಾ ಪ್ರಿಯದರ್ಶಿನಿ ಗಾಂಧಿ ಆಧ್ಯಾತ್ಮಿಕ ಚಿಂತನೆಗಳು ದೀನ ದಲಿತರ ಪರ ಹೋರಾಟಗಳು ಉಳುವವನೇ ಭೂಮಿ ಒಡೆಯ ಎಂಬ ಬಡವರ ಪಾಲಿಗೆ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ನಗರ ಘಟಕ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಹೇಳಿದರು.

- ತರೀಕೆರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮ ದಿನಾಚರಣೆ

ಕನ್ನಡಪ್ರಭ ವಾರ್ತೆ ತರೀಕೆರೆ

ಇಂದಿರಾ ಪ್ರಿಯದರ್ಶಿನಿ ಗಾಂಧಿ ಆಧ್ಯಾತ್ಮಿಕ ಚಿಂತನೆಗಳು ದೀನ ದಲಿತರ ಪರ ಹೋರಾಟಗಳು ಉಳುವವನೇ ಭೂಮಿ ಒಡೆಯ ಎಂಬ ಬಡವರ ಪಾಲಿಗೆ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ನಗರ ಘಟಕ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿ 1938ರಲ್ಲಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಲಾಲ್ ಬಹದ್ದೂರ್ ಶಾಸ್ತ್ರಿ ನಿಧನದ ನಂತರ, 1966 ರಲ್ಲಿ ಪ್ರಧಾನಿಯಾದರು ಮತ್ತು 1977 ರವರೆಗೆ ಅಧಿಕಾರದಲ್ಲಿದ್ದರು ಎಂದರು.

ದಿವಂಗತ ಇಂದಿರಾ ಗಾಂಧಿ ಬ್ಯಾಂಕುಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿಯಂತಹ ಆರ್ಥಿಕ ಬದಲಾವಣೆಗಳನ್ನು ಜಾರಿಗೆ ತಂದರು. ಇದು ಭಾರತದ ಕೃಷಿ ವಲಯಕ್ಕೆ ಕ್ರಾಂತಿಕಾರಿ ಬದಲಾವಣೆ ತಂದಿತು. ಅವರು ಬಾಂಗ್ಲಾದೇಶದ ಸೃಷ್ಟಿಗೆ ಕಾರಣ ವಾದರು, ಈ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದರು. ಪ್ರಧಾನಮಂತ್ರಿಯಾಗಿ ಸಾಕಷ್ಟು ಬಡವರಿಗೆ ಅನುಕೂಲವಾಗುವಂತಹ ಕೆಲಸಗಳನ್ನು ನಾವು ಇಂದಿಗೂ ಕೂಡ ಸ್ಮರಿಸುತ್ತೇವೆ ಎಂದು ಹೇಳಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಪುರಸಭೆ ಸದಸ್ಯರು, ಪುರಸಭೆ ನಾಮಿನಿ ಸದಸ್ಯರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪರ್ವಿನ್ ತಾಜ್, ಪುರಸಭಾ ಮಾಜಿಅಧ್ಯಕ್ಷೆ ಹೇಮಲತಾ ರೇವಣ್ಣ, ಟಿ.ವಿ.ಶ್ರೀನಿವಾಸ್, ಮಹಮದ್ ಇರ್ಷಾದ್, ಮುಖಂಡರಾದ ಟಿ.ಎನ್.ಜಗದೀಶ್, ಗಿರೀಶ್, ಕಾಂಗ್ಸೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷ, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಇಂದಿರಾಗಾಂಧಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.-

24ಕೆಟಿಆರ್.ಕೆ.5ಃ

ತರೀಕೆರೆಯಲ್ಲಿ ನಗರ ಕಾಂಗ್ರೆಸ್ ಘಟಕದಿಂದ ದಿವಂಗತ ಇಂದಿರಾ ಗಾಂಧಿ ಜನ್ಮದಿನಾಚರಣೆ ಏರ್ಪಡಿಸಲಾಗಿತ್ತು.