ಸಾರಾಂಶ
ಯಾರೇ ಕೋಮು ಗಲಭೆ ಮಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಂದು ಎಚ್ಚರಿಕೆ ನೀಡಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯ ಸರ್ಕಾರ ಕೋಮು, ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಂದು ಎಚ್ಚರಿಕೆ ನೀಡಿದರು. ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರದ ಅಳವಣ ಗಲ್ಲಿಯಲ್ಲಿ ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿ ಕಲ್ಲು ತೂರಾಟ ಮಾಡಲಾಗಿದೆ. ಈ ಗಲಾಟೆಯಲ್ಲಿ ಸಂಬಂಧ ಶಹಪುರ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿದೆ. ಈ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಕೆಲವರು ಜಾತಿ, ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಸಂಕಷ್ಟದ ಗಳಿಗೆಯಲ್ಲಿ ಎಲ್ಲರೂ ಒಂದಾಗಿರೋಣ, ಎಚ್ಚರವಾಗಿರೋಣ, ಸಾರ್ವಜನಿಕರು ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು.-----------
ಯಾವುದೇ ಪ್ರದೇಶದಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆದಲ್ಲಿ ಆ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆ ವಿನಃ ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಬೆಳಗಾವಿಯ ಶಾಂತಿ ಪರಿಸರದಲ್ಲಿ ಅನ್ಯ ವ್ಯಕ್ತಿಗಳಿಂದ ಕೋಮುಗಲಭೆ ಹುಟ್ಟು ಹಾಕುವ ಪ್ರಯತ್ನ ನಡೆಯುತ್ತಿದೆ. ಅಲ್ಲದೇ ಜಾತಿಗೆ ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡೆದೆ ಕೋಮು ಗಲಭೆ ಸೃಷ್ಟಿಸುವರ ಮಾತಿಗೆ ಕಿವಿಗೊಡದೇ ಬೆಳಗಾವಿ ನಗರದಲ್ಲಿ ಶಾಂತಿಯನ್ನು ಕಾಪಾಡಬೇಕು.-ಸತೀಶ್ ಜಾರಕಿಹೊಳಿ, ಸಚಿವ.