ಜಗಳೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಂಭ ಫೆ.11ರಂದು ಬುಧವಾರ ಹಮ್ಮಿಕೊಳ್ಳಲಾಗಿದೆ. ಆದಿಜಾಂಬವ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಮುನಿ ದೇಶಿಕೇಂದ್ರ ಮಹಾಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಲೋಕೇಶ್ ಎಂ. ಐಹೊಳೆ ಹೇಳಿದ್ದಾರೆ.
- ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ ಸಾನ್ನಿಧ್ಯ, ಶಾಸಕ ದೇವೇಂದ್ರಪ್ಪ ಉದ್ಘಾಟನೆ: ಅಧ್ಯಕ್ಷ ಲೋಕೇಶ್
- - -- ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರು, ಖಜಾಂಚಿ, ಕಾರ್ಯದರ್ಶಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದಗ್ರಹಣ
- ಕಾನಾಮಡುಗಿನ ದಾ.ಮ. ಐಮಡಿ ಶರಣಾರ್ಯರು, ಪ್ರ.ಬ್ರ.ಈ. ವಿವಿ ಸಂಚಾಲಕಿ ಅಕ್ಕ ಭಾರತಿ ಭಾಗಿ- ಕಾರ್ಯಕ್ರಮಕ್ಕೆ ಆಗಮಿಸಲಿರುವ ಹಿರಿಯ ಪತ್ರಕರ್ತರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು
- - -ಕನ್ನಡಪ್ರಭ ವಾರ್ತೆ ಜಗಳೂರು
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಂಭ ಫೆ.11ರಂದು ಬುಧವಾರ ಹಮ್ಮಿಕೊಳ್ಳಲಾಗಿದೆ. ಆದಿಜಾಂಬವ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಮುನಿ ದೇಶಿಕೇಂದ್ರ ಮಹಾಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಲೋಕೇಶ್ ಎಂ. ಐಹೊಳೆ ಹೇಳಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2025-28ನೇ ಸಾಲಿನ ನೂತನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರು, ಖಜಾಂಚಿ, ಕಾರ್ಯದರ್ಶಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದರು.
ಜಗಳೂರು ಕ್ಷೇತ್ರ ಶಾಸಕ ಬಿ.ದೇವೇಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಧ್ಯಕ್ಷರಾದ ಇ.ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡುಗಿನ ದಾ.ಮ. ಐಮಡಿ ಶರಣಾರ್ಯರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಅಕ್ಕ ಭಾರತಿ ಭಾಗವಹಿಸಲಿದ್ದಾರೆ ಎಂದರು.ಉಪಾಧ್ಯಕ್ಷ ಶಿವಲಿಂಗಪ್ಪ ಮಾತನಾಡಿ, ವಿಶೇಷ ಆಹ್ವಾನಿತರಾಗಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿ.ಕೆ.ಗ್ಲೋಬಲ್ ಸಲ್ಯೂಷನ್ಸ್ ಬೆಂಗಳೂರಿನ ಜೆ.ಕೆ. ಕೇದಾರನಾಥ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಟಿ.ಗುರುಸಿದ್ದನಗೌಡ, ಎಸ್.ವಿ. ರಾಮಚಂದ್ರಪ್ಪ, ಎಚ್.ಪಿ.ರಾಜೇಶ್, ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಕಲ್ಲೇರುದ್ರೇಶ್, ಕಾಂಗ್ರೆಸ್ ಮುಖಂಡ ಕೆ.ಪಿ.ಪಾಲಯ್ಯ, ಎಂ.ಡಿ.ಕೀರ್ತಿಕುಮಾರ್ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬದರಿನಾಥ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ ಭಾಗವಹಿಸುವರು.
ಅಲ್ಲದೇ, ಭಾ.ಪ.ಒ. ಸದಸ್ಯರಾದ ಎಸ್.ಕೆ.ಒಡೆಯರ್, ಜಿಲ್ಲಾ ಖಜಾಂಚಿ ಜೆ.ಎಸ್.ವೀರೇಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಜಿ.ಎಸ್.ಚಿದಾನಂದ್, ಉಪಾಧ್ಯಕ್ಷ ಬಿ.ಪಿ.ಸುಭಾನ್, ಹಿರಿಯ ಪತ್ರಕರ್ತರಾದ ಅಣಬೂರು ಮಠದ ಕೊಟ್ರೇಶ್, ಡಿ.ಶ್ರೀನಿವಾಸ್, ಚಿತ್ರದುರ್ಗ ಹೆಚ್ಚುವರಿ ಎಸ್‌ಪಿ ಡಾ. ಆರ್.ಶಿವಕುಮಾರ್, ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ, ತಾಪಂ ಇಒ ಕೆಂಚಪ್ಪ, ಪಪಂ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ್, ಇನ್‌ಸ್ಪೆಕ್ಟರ್ ಬಿ.ವಿ.ಸಿದ್ರಾಮಯ್ಯ, ವಕೀಲರ ಸಂಘದ ಅಧ್ಯಕ್ಷ ಟಿ.ಬಸವರಾಜ್, ಬಿಜೆಪಿ ಮಂಡಲ ಅಧ್ಯಕ್ಷ ಎ.ಎಂ. ಆರಾಧ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹ್ಮದ್, ವೇದಮೂರ್ತಿ, ಜೈಮುನಿ ಸೇರಿದಂತೆ ಹಿರಿಯ ಪತ್ರಕರ್ತರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಸ್.ಎಂ. ಸೋಮನಗೌಡ, ಎಂ.ಸಿ.ಬಸವರಾಜ್, ಖಜಾಂಚಿ ಬಾಬು ಮರೇನಹಳ್ಳಿ, ಎಚ್.ಆರ್.ಬಸವರಾಜ್, ರಾಜಪ್ಪ, ಸತೀಶ್, ಉಜ್ಜಿನಪ್ಪ ಇದ್ದರು.
- - --9ಜೆಎಲ್‌ಆರ್‌ಚಿತ್ರ1ಎ:
ಜಗಳೂರು ಪಟ್ಟಣದಲ್ಲಿ ಕಾ.ನಿ.ಪ. ಸಂಘದ ಅಧ್ಯಕ್ಷ ಲೋಕೇಶ್ ಎಂ. ಐಹೊಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.