ಹೊಸಹಳ್ಳಿ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪರಿಶೀಲನೆ

| Published : May 19 2025, 02:09 AM IST

ಹೊಸಹಳ್ಳಿ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಗುಂಡಮಗೆರೆ, ಹೊಸಹಳ್ಳಿ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಟ್ಯಾಂಕರ್‌ಗಳ ಮೂಲಕ ರಾಸಾಯನಿಕ ಯುಕ್ತ ಕೈಗಾರಿಕಾ ತ್ಯಾಜ್ಯ ನೀರನ್ನು ಸುರಿಯಲಾಗಿರುವ ಕುರಿತಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ತಾಲೂಕಾದ್ಯಂತ ವ್ಯಾಪಕ ಆಕ್ರೋಶದ ಬೆನ್ನಲ್ಲೇ ತಹಸೀಲ್ದಾರ್ ನೇತೃತ್ವದಲ್ಲಿ ವಿವಿಧ ಇಲಾಲಾ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ರಾಸಾಯನಿಕ ತ್ಯಾಜ್ಯದಿಂದ ಉಂಟಾಗುತ್ತಿರುವ ಹಾನಿ ತಡೆಗೆ ತ್ವರಿತವಾಗಿ ತ್ಯಾಜ್ಯ ವಿಲೇವಾರಿಗೆ ಜೆಸಿಬಿಯಿಂದ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ಇದೇ ವೇಳೆ ಅಪರಾಧ ಚಟುವಟಿಕೆ ತಡೆಗೆ ಈ ವ್ಯಾಪ್ತಿಯಲ್ಲಿ ನಾಲ್ಕು ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಯಿತು. ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನೇತೃತ್ವದಲ್ಲಿ ಗಸ್ತು, ಕೃತ್ಯ ಮಾಡಿದವರ ಪತ್ತೆಗೆ ತಂಡ ರಚಿಸಲಾಗಿದೆ ಎನ್ನಲಾಗಿದೆ.

ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ಇಒ ಮುನಿರಾಜು, ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ದನ್ ಸೇರಿದಂತೆ ಪರಿಸರ ಮಾಲಿನ್ಯ ಇಲಾಖೆ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಹೊಸಹಳ್ಳಿ ಗ್ರಾಪಂ ಪಿಡಿಒ, ಸ್ಥಳೀಯ ಮುಖಂಡ ನರಸಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು.

17ಕೆಡಿಬಿಪಿ6-

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ರಸ್ತೆಯಲ್ಲಿ ರಾಸಾಯನಿಕ ತ್ಯಾಜ್ಯ ಸುರಿದ ಪ್ರಕರಣ ಹಿನ್ನಲೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಂಡರು.