ಸಾರಾಂಶ
- ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾಯಕೊಂಡ ಶಾಸಕ ಬಸವಂತಪ್ಪ ಬೇಸರ
- - -ಕನ್ನಡಪ್ರಭ ವಾರ್ತೆ, ದಾವಣಗೆರೆ
ದೇಶಕ್ಕೆ ಸ್ವಾತಂತ್ರ್ಯ ಬಂದು ಇಂದಿಗೆ 79 ವರ್ಷ ಕಳೆದಿದೆ. ಆದರೂ, ಎಲ್ಲರಿಗೂ ಸಾಂವಿಧಾನಿಕವಾಗಿ ಎಲ್ಲ ಹಕ್ಕುಗಳು ಸಿಕ್ಕಿಲ್ಲ. ನಮ್ಮ ಸಮಾಜದಿಂದ ಅಸಮಾನತೆ ದೂರವಾಗಿಲ್ಲ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಬೇಸರ ವ್ಯಕ್ತಪಡಿಸಿದರು.ತಾಲೂಕಿನ ಮಾಯಕೊಂಡ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು. ಸಂವಿಧಾನ ನೀಡಿರುವ ಆರ್ಥಿಕ, ಸಾಮಾಜಿಕ ಸಮಾನತೆ ಬಗ್ಗೆ ಜಾಗೃತಿ ಮೂಡಿಸಬೇಕು. ದೇಶದ ಜನರಿಗೆ ಸಂವಿಧಾನ ನಮಗೇನು ಕೊಟ್ಟಿದೆ ಎನ್ನುವುದನ್ನು ತಿಳಿಸಬೇಕಾಗಿದೆ ಎಂದರು.
ಭಾರತ 78 ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಣೆಗಷ್ಟೇ ಸೀಮಿತಗೊಳಿಸಬಾರದು. ಅವರು ತಮ್ಮ ಬದುಕಿನಲ್ಲಿ ನಂಬಿದ್ದ ಮತ್ತು ಅಳವಡಿಸಿಕೊಂಡಿದ್ದ ಆದರ್ಶಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮ ಪ್ರಮುಖ ಕರ್ತವ್ಯ. ಮಾಯಕೊಂಡದಲ್ಲಿ ಮದಕರಿ ನಾಯಕನ ಪುತ್ಥಳಿ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಬುಳ್ಳಾಪುರ ಗುಡ್ಡದಲ್ಲಿರುವ ಬ್ರಿಟಿಷರು ನಿರ್ಮಿಸಿದ ಕೆರೆ ಅಭಿವೃದ್ಧಿಗೆ ಸದನದಲ್ಲಿ ಪ್ರಸ್ತಾಪ ಮಾಡಲಾಗಿದೆ. ಸರ್ಕಾರದಿಂದ ಅನುಮೋದನೆ ಪಡೆದು ಕೆರೆ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಕಮ್ಮ ಲಿಂಗರಾಜ್, ಉಪಾಧ್ಯಕ್ಷೆ ಶಿವಮ್ಮ ಮಲ್ಲಿಕಪ್ಪ, ಕೆಪಿಎಸ್ ಪ್ರಾಚಾರ್ಯ ಡಾ. ಸಿ. ಬಸವರಾಜಪ್ಪ, ಕೆಪಿಎಸ್ ಉಪ ಪ್ರಾಚಾರ್ಯ ಟಿ.ಎಸ್. ನಾಗರಾಜ್, ಉಪ ತಹಸೀಲ್ದಾರ್ ಹಾಲೇಶಪ್ಪ, ಆರ್.ಐ. ಹಿರೇಗೌಡರ, ಸಿಪಿಐ ರಾಘವೇಂದ್ರ, ಪಿಎಸ್ಐ ಎಸ್.ಬಿ. ಅಜಯ್, ಮುಖಂಡರಾದ ಜಿ.ಬಿ. ಮಲ್ಲೇಶ್, ಎಂ.ಜಿ.ಗೋಪಾಲ್, ಎಸ್.ಜಿ. ರುದ್ರೇಶ್, ಡಾ. ನಾಗೇಂದ್ರಪ್ಪ ಪಿಡಿಒ ಎನ್. ಶ್ರೀನಿವಾಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕೆ ಬೀರಪ್ಪ, ಬಸವೇಶ್ವರ ಸರ್ಕಾರಿ ಕಾಲೇಜು ಪ್ರಾಚಾರ್ಯೆ ಡಾ. ತ್ರಿವೇಣಿ, ಪ್ರಾಧ್ಯಾಪಕರು, ಶಿಕ್ಷಕರು, ಗ್ರಾಪಂ ಸದಸ್ಯರು, ಗ್ರಾಮ ಮುಖಂಡರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.
- - --15ಕೆಡಿವಿಜಿ020:
ಮಾಯಕೊಂಡ ಕರ್ನಾಟಕ ಪಬ್ಲಿಕ್ ಶಾಲೆ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ ಮಾತನಾಡಿದರು.