ಈ ಬಾರಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಲು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.
ಮೂಲ್ಕಿ: ರಾಜ್ಯದಲ್ಲಿ ಆಡಳಿತವಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ಸಾಧನೆಗಳನ್ನು ತಿಳಿಸಿ, ಈ ಬಾರಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಲು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಡಿ.21ರಂದು ನಡೆಯಲಿರುವ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ಪೂರ್ವಭಾವಿಯಾಗಿ ಕಿನ್ನಿಗೋಳಿಯ ರಾಜರತ್ನಪುರ ಶ್ರೀ ಅಣ್ಣಯ್ಯ ಆಚಾರ್ಯ ಸಭಾಭವನದಲ್ಲಿ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 18 ವಾರ್ಡಿನ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಮಾತನಾಡಿ, ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ನಾಗರಿಕರಿಗೆ ಮೂಲಭೂತ ಸೌಕರ್ಯಗಳ ಜೊತೆಗೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡುವುದಾಗಿ ಹೇಳಿದರು.
ಕಿನ್ನಿಗೋಳಿ, ಕಟೀಲು, ಹಳೆಯಂಗಡಿ ಪರಿಸರದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ನಾಯಕರಾದ ಶಾಲೆಟ್ ಪಿಂಟೋ, ನವೀನ್ ಚಂದ್ರ ಆಳ್ವ,ಗಿರೀಶ್ ಆಳ್ವ, ಅನಿಲ್ ಕುಮಾರ್, ಪ್ರಮೋದ್ ಕುಮಾರ್ ಕಿನ್ನಿಗೋಳಿ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಸದಸ್ಯ ಎಚ್ ವಸಂತ ಬರ್ನಾಡ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಡಿಸೋಜಾ,ಟಿ ಎಚ್ ಮಯ್ಯದ್ದಿ ಕಿನ್ನಿಗೋಳಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ ಮತ್ತಿತರರು ಉಪಸ್ಥಿತರಿದ್ದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಸ್ವಾಗತಿಸಿದರು. ಪ್ರಕಾಶ್ ಕಿನ್ನಿಗೋಳಿ ನಿರೂಪಿಸಿದರು.