ಸಾರಾಂಶ
ಚಿಕ್ಕಮಗಳೂರು, ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್) ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿ ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಜಮೀನು ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್‌ಕುಮಾರ್ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್) ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿ ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಜಮೀನು ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್‌ಕುಮಾರ್ ಮನವಿ ಮಾಡಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರಕಾರ 2017- 18 ರಲ್ಲೇ ಕಾಫಿ ಬೆಳೆಗಾರರ ಅನಧಿಕೃತ ಸಾಗುವಳಿಯನ್ನು ಗುತ್ತಿಗೆ ನೀಡಲು ನಿರ್ಧರಿಸಿತ್ತು. ನಂತರ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ 25 ಎಕರೆವರೆಗಿನ ಅನಧಿಕೃತ ಸಾಗುವಳಿ ಜಮೀನನ್ನು ಗುತಿಗೆ ನೀಡಲು ಅನುಮೋದಿಸಿತ್ತು ಎಂದರು.
ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುತ್ತಿಗೆ ಆಧಾರದಲ್ಲಿ ಭೂಮಿ ನೀಡುವ ಪ್ರಕ್ರಯೆಗೆ ಚಾಲನೆ ನೀಡಿ ಅರ್ಜಿ ಕರೆದಿದೆ. ಅರ್ಹ ಬೆಳೆಗಾರರು ನಮೂನೆ 9 ರಲ್ಲಿ ತಹಸೀಲ್ದಾರ್ ಅಥವಾ ನಾಡಕಚೇರಿಯಲ್ಲಿ ಆ.7 ರಿಂದ 90 ದಿನದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಅವಕಾಶವನ್ನು ಬೆಳೆಗಾರರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಜಿಎಫ್ ಮನವಿ ಮಾಡುತ್ತದೆ ಎಂದು ತಿಳಿಸಿದರು. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಸಚಿವರು ಹಾಗೂ ಎಲ್ಲ ರಾಜ್ಯ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಅವರು, ಒತ್ತುವರಿ ಜಮೀನು ಗುತ್ತಿಗೆ ನೀಡಬೇಕು ಅಥವಾ ಸಕ್ರಮ ಮಾಡಿಕೊಡಬೇಕು ಎಂದು ಆಗ್ರಹಿಸಿ ನಡೆದ ನಮ್ಮ ಸುದೀರ್ಘ ಕಾಲದ ಹೋರಾಟಕ್ಕೆ ಸಹಕರಿಸಿದ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆ ಹಾಲಿ ಹಾಗೂ ಮಾಜಿ ಶಾಸಕರು, ಹಾಲಿ ಹಾಗೂ ಮಾಜಿ ಸಂಸದರು, ವಿಧಾನ ಪರಿಷತ್ ಹಾಲಿ ಹಾಗೂ ಮಾಜಿ ಸದಸ್ಯರಿಗೆ ಅಭಿನಂದಿಸುತ್ತೇವೆ ಎಂದರು.ಕೆಜಿಎಫ್ ಮುಖಂಡ ಎ.ಕೆ ವಸಂತೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಕಾಫಿ, ಮೆಣಸು ಮತ್ತಿತರ ಬೆಳೆಗಳು ಸಾಕಷ್ಟು ನಾಶವಾಗಿದ್ದು, ಕಾಫಿ ಮಂಡಳಿ ಮತ್ತು ಸಂಬಂಧಿಸಿದ ಇಲಾಖೆ ಶೀಘ್ರ ಸಮೀಕ್ಷೆ ಮಾಡಿ ವರದಿ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಜಿಎಫ್ ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ, ಪದಾಧಿಕಾರಿಗಳಾದ ಎಂ.ಎಸ್ ಲಿಂಗಪ್ಪಗೌಡ, ಮಹೇಶ್‌ಗೌಡ, ಶಂಕರ್, ರತ್ನಾಕರ, ಸುರೇಶ್, ದೇವರಾಜ್, ತೌಸಿಬ್ ಉಪಸ್ಥಿತರಿದ್ದರು.8 ಕೆಸಿಕೆಎಂ 4
ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ. ಎಚ್.ಟಿ. ಮೋಹನ್‌ಕುಮಾರ್ ಮಾತನಾಡಿದರು. ಬಿ.ಎಸ್. ಜಯರಾಂ, ಲಿಂಗಪ್ಪಗೌಡ, ಮಹೇಶ್‌ಗೌಡ ಇದ್ದರು.