ಸಾರಾಂಶ
ಉಜಿರೆಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾದಲ್ಲಿ ಆಸಕ್ತಿಯನ್ನುಂಟು ಮಾಡುವ ಮೂಲ ಉದ್ದೇಶದೊ೦ದಿಗೆ, ಮನೆಯಲ್ಲಿ ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ತಯಾರಿಸುವ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಉಜಿರೆಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾದಲ್ಲಿ ಆಸಕ್ತಿಯನ್ನುಂಟು ಮಾಡುವ ಮೂಲ ಉದ್ದೇಶದೊ೦ದಿಗೆ, ಮನೆಯಲ್ಲಿ ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ತಯಾರಿಸುವ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಾಗಾರದಲ್ಲಿ ನಾವು ದೈನ೦ದಿನ ಜೀವನದಲ್ಲಿ ಉಪಯೋಗಿಸುವ ವಸ್ತುಗಳಾದ ಟೂತ್ ಪೌಡರ್, ಸೋಪು, ಲಿಕ್ವಿಡ್ ಸೋಪು, ಡಿಟರ್ಜೆ೦ಟ್ ಪೌಡರ್, ನೋವು ನಿವಾರಕ ಕ್ರೀ೦ಗಳು, ಫಿನೈಲ್, ಸುಗ೦ಧ ದ್ರವ್ಯಗಳು ಇತ್ಯಾದಿ ವಸ್ತುಗಳನ್ನು ತಯಾರಿಸಲು ಬೇಕಾಗುವ ಕಚ್ಛಾವಸ್ತುಗಳು ಮತ್ತು ಅದಕ್ಕೆ ತಗಲುವ ವೆಚ್ಚ ಇದರ ಬಗ್ಗೆ ಮಾಹಿತಿ ನೀಡಲಾಯಿತು.ಜೊತೆಗೆ ರಸಾಯನ ಶಾಸ್ತ್ರ ಪ್ರಯೋಗಾಲಯದಲ್ಲಿ ಇವುಗಳನ್ನು ತಯಾರಿಸಿ ತೋರಿಸಲಾಯಿತು. ಪ್ರೌಢಶಾಲೆಯ ವಿದ್ಯಾರ್ಥಿಗಳಿಂದಲೇ ಕೆಲವು ವಸ್ತುಗಳನ್ನು ತಯಾರಿಸಲು ಉತ್ತೇಜಿಸಲಾಯಿತು.
ಕಾಲೇಜಿನ ತೃತೀಯ ವಿಜ್ಞಾನ ಪದವಿಯ ರಸಾಯನ ಶಾಸ್ತ್ರದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಂದಕುಮಾರಿ ಕೆ. ಪಿ. ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಗಾರದ ಉದ್ದೇಶ ಹಾಗು ಪ್ರಾಮುಖ್ಯತೆಯನ್ನು ತೃತೀಯ ವಿಜ್ಞಾನ ಪದವಿಯ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ರಜನಿ ತಿಳಿಸಿದರು. ಉಪನ್ಯಾಸಕಿ ದಿವ್ಯ ಸಂಯೋಜಿಸಿದ ಈ ಕಾರ್ಯಕ್ರಮಕ್ಕೆ ಉಪನ್ಯಾಸಕಿಯರಾದ ಗಾನವಿ ಮತ್ತು ಸಂಗೀತ ಬಿ. ಸಹಕರಿಸಿದರು.