ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ ಡಿಜಿಪಿ ಸಲೀಂ

| Published : Jul 10 2025, 12:45 AM IST

ಸಾರಾಂಶ

ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿನ ಭದ್ರತಾ ವ್ಯವಸ್ಥೆಯ ಕುರಿತ ಪಿಪಿಟಿ ಪ್ರದರ್ಶಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರುರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಬುಧವಾರ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿ, ಅಧಿಕಾರಿಗಳ ಸಭೆ ನಡೆಸಿದರು.ಸಂಜೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಪರಿಶೀಲಿಸಿದರು. ಬೆಟ್ಟದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ಪಡೆದರು. ಕಾನೂನು ಮತ್ತು ಸುವ್ಯವಸ್ಥೆ ಕುರಿತು ಕೆಲವು ಸಲಹೆ ನೀಡಿದರು.ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿನ ಭದ್ರತಾ ವ್ಯವಸ್ಥೆಯ ಕುರಿತ ಪಿಪಿಟಿ ಪ್ರದರ್ಶಿಸಿದರು. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಪರಾಧ ವಿಮರ್ಶನೆ ನಡೆಸಿದರು. ಬಾಕಿ ಉಳಿದಿರುವ ಪ್ರಕರಣಗಳ ಮಾಹಿತಿ ನೀಡಿದರು. ಆನ್‌ ಲೈನ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ತಂತ್ರಜ್ಞಾನದ ಕುರಿತು ಅರಿವು ಇರಬೇಕು ಎಂದು ಅಧಿಕಾರಿಗಳಿಗೆ ಪೊಲೀಸ್ ಮಹಾ ನಿರ್ದೇಶಕರು ಸೂಚಿಸಿದರು. ಪೊಲೀಸ್ ಠಾಣೆಗೆ ಭೇಟಿಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಡಿಜಿಪಿ ಡಾ.ಎಂ.ಎ. ಸಲೀಂ ಅವರು ದೇವರಾಜ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಠಾಣೆಯಲ್ಲಿ ಸಾರ್ವಜನಿಕರಿಗೆ ಕಲ್ಪಿಸಿರುವ ಮೂಲ ಸೌಕರ್ಯದ ಬಗ್ಗೆ ಮಾಹಿತಿ ಪಡೆದರು.ಗ್ರಾಹಕ ಸ್ನೇಹಿಯಾಗಿ ಪೊಲೀಸರು ಕೆಲಸ ಮಾಡುವಂತೆ ಸೂಚಿಸಿದರು. ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ್, ಡಿಸಿಪಿಗಳಾದ ಬಿಂದು ಮಣಿ, ಕೆ.ಎಸ್. ಸುಂದರ್ ರಾಜ್ ಇದ್ದರು.