ಸಾರಾಂಶ
ಪ್ರಸಿದ್ಧ ಆಯುರ್ವೇದ ವೈದ್ಯೆ ಡಾ.ವಾಣಿಶ್ರೀ ಐತಾಳ್ ಪ್ರಸ್ತುತ ಮಕ್ಕಳಲ್ಲಿ ಉದ್ಭವಿಸುತ್ತಿರುವ ಆರೋಗ್ಯ ಸಮಸ್ಯೆ, ಮೊಬೈಲ್ ಗೀಳು, ಪೋಷಕರು ಮತ್ತು ಮಕ್ಕಳಲ್ಲಿ ಇರುವ ಸಂಬಂಧಗಳ ಬಗ್ಗೆ ವಿಸ್ತೃತವಾಗಿ ತಿಳಿಯಪಡಿಸಿದರು.
ಕನ್ನಡಪ್ರಭ ವಾರ್ತೆ ಕೋಟ
ಇಲ್ಲಿನ ಪಂಚವರ್ಣ ಮಹಿಳಾ ಮಂಡಲದ ವತಿಯಿಂದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಅರಿವು ನಿಮಗಿರಲಿ ಸರಣಿಯ 12ನೇ ಕಾರ್ಯಕ್ರಮವನ್ನು ಪ್ರಾಂಶುಪಾಲ ಕೆ. ಜಗದೀಶ್ ನಾವಡ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ನಂತರ ಅವರು ಮಕ್ಕಳಲ್ಲಿ ಆರೋಗ್ಯ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಆಗಾಗ ಅರಿವು ಮೂಡಿಸುವ ಪಂಚವರ್ಣ ಮಹಿಳಾ ಮಂಡಲದ ಅರಿವು ಸರಣಿ ಕಾರ್ಯಕ್ರಮ ಶ್ಲಾಘನೀಯ ಎಂದರು.ಪದವಿ ಪೂರ್ವಇದೇ ವೇಳೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರಸಿದ್ಧ ಆಯುರ್ವೇದ ವೈದ್ಯೆ ಡಾ.ವಾಣಿಶ್ರೀ ಐತಾಳ್ ಪ್ರಸ್ತುತ ಮಕ್ಕಳಲ್ಲಿ ಉದ್ಭವಿಸುತ್ತಿರುವ ಆರೋಗ್ಯ ಸಮಸ್ಯೆ, ಮೊಬೈಲ್ ಗೀಳು, ಪೋಷಕರು ಮತ್ತು ಮಕ್ಕಳಲ್ಲಿ ಇರುವ ಸಂಬಂಧಗಳ ಬಗ್ಗೆ ವಿಸ್ತೃತವಾಗಿ ತಿಳಿಯಪಡಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಸಭೆಯಲ್ಲಿ ಪಂಚವರ್ಣ ಯುವಕ ಮಂಡಲದ ನೂತನ ಉಪಾಧ್ಯಕ್ಷ ದಿನೇಶ್ ಆಚಾರ್ ಉಪಸ್ಥಿತರಿದ್ದರು. ವಿವೇಕ ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಗದೀಶ ಹೊಳ್ಳ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪ್ರಾಸ್ತಾವನೆ ಸಲ್ಲಿಸಿದರು. ಶಿಕ್ಷಕ ನರೇಂದ್ರ ಕುಮಾರ್ ಕೋಟ ವಂದಿಸಿದರು.