ಸಾರಾಂಶ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಹೆಬ್ರಿ ಇದರ ಐಕ್ಯೂಏಸಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಇವರ ಸಹಯೋಗದಲ್ಲಿ “ಹಾವು ಕಡಿತ ಮತ್ತು ಚಿಕಿತ್ಸಾ ವಿಧಾನ” ಕುರಿತು ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕನ್ನಡಪ್ರಭ ವಾರ್ತೆ ಹೆಬ್ರಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಹೆಬ್ರಿ ಇದರ ಐಕ್ಯೂಏಸಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಇವರ ಸಹಯೋಗದಲ್ಲಿ “ಹಾವು ಕಡಿತ ಮತ್ತು ಚಿಕಿತ್ಸಾ ವಿಧಾನ” ಕುರಿತು ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿಯ ಆರೋಗ್ಯ ಆಡಳಿತಾಧಿಕಾರಿ ಡಾ. ಸಂತೋಷ್ ಕುಮಾರ್ ಬೈಲೂರು ಅವರು ಮಾತನಾಡಿ, “ಹಾವು ಕಡಿದ ಸಂದರ್ಭದಲ್ಲಿ ಸಮಯ ವ್ಯರ್ಥ ಮಾಡದೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದಲ್ಲಿ ಜೀವ ಉಳಿಯುವ ಸಾಧ್ಯತೆ ಹೆಚ್ಚುತ್ತದೆ” ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿದ್ಯಾಧರ ಎಸ್. ಹೆಗ್ಡೆ ಅವರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಿಂದ ಪಡೆದ ಮಾಹಿತಿಯನ್ನು ಇತರರಿಗೂ ಹಂಚಿಕೊಳ್ಳುವಂತೆ ಪ್ರೇರೇಪಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ತಂತ್ರಜ್ಞಾನ ವಿಭಾಗದ ಅವಿನಾಶ್ ಭಟ್ ಹಾಗೂ ತಂಡ ಸ್ಥಳೀಯವಾಗಿ ಕಂಡುಬರುವ ವಿಷಪೂರಿತ ಹಾವುಗಳ ಪರಿಚಯ ನೀಡಿ, ಅವು ಕಡಿದ ಸಂದರ್ಭಗಳಲ್ಲಿ ಅನುಸರಿಸಬೇಕಾದ ಪ್ರಥಮ ಚಿಕಿತ್ಸೆಯ ಕ್ರಮಗಳ ಬಗ್ಗೆ ಕಿರು ಪ್ರಹಸನ ಹಾಗೂ ಪ್ರಾತ್ಯಕ್ಷಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ. ಗಣೇಶ್ ಕಾಮತ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯದ ಸುಷ್ಮಾ ರಾವ್, ಯೂತ್ ರೆಡ್ ಕ್ರಾಸ್ ಸಂಚಾಲಕರಾದ ಡಾ. ಮನೋಜ್ ಕುಮಾರ್, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ಸಂಜನಾ (ದ್ವಿತೀಯ ಬಿಕಾಂ) ವಂದಿಸಿದರು. ಶಿವಾನಿ (ದ್ವಿತೀಯ ಬಿಕಾಂ) ಕಾರ್ಯಕ್ರಮವನ್ನು ನಿರೂಪಿಸಿದರು.