ಸಾರಾಂಶ
ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕವಾಗಿದೆ ಎಂದು ಹಂಜಳಿಗೆ ಕಾಳಿಂಗಪ್ಪ ವೆಲ್‌ಫೇರ್ ಅಸೋಸಿಯೇಷನ್ ಸಂಸ್ಥಾಪಕ ಹಂಜಳಿಗೆ ಮಂಜುನಾಥ್ ತಿಳಿಸಿದರು. ಟಿ. ಗುಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆ ವತಿಯಿಂದ ಸುಮಾರು ೨ ಲಕ್ಷ ವೆಚ್ಚದ ಅರ್ಚನ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಸ್ಮಾರ್ಟ್‌ಕ್ಲಾಸನ್ನು ಪ್ರಾರಂಭಿಸಿ, ಮೊದಲನೇ ತರಗತಿಯಲ್ಲಿ ಗ್ರಾಮೀಣ ಮಕ್ಕಳಿಗೆ ಡಿಜಿಟಲ್ ಎಜುಕೇಶನ ಕಲಿಸುವುದು ಇಂದು ಅನಿವಾರ್ಯವಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಆಲೂರು
ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕವಾಗಿದೆ ಎಂದು ಹಂಜಳಿಗೆ ಕಾಳಿಂಗಪ್ಪ ವೆಲ್‌ಫೇರ್ ಅಸೋಸಿಯೇಷನ್ ಸಂಸ್ಥಾಪಕ ಹಂಜಳಿಗೆ ಮಂಜುನಾಥ್ ತಿಳಿಸಿದರು.ತಾಲೂಕಿನ ಟಿ. ಗುಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆ ವತಿಯಿಂದ ಸುಮಾರು ೨ ಲಕ್ಷ ವೆಚ್ಚದ ಅರ್ಚನ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಸ್ಮಾರ್ಟ್‌ಕ್ಲಾಸನ್ನು ಪ್ರಾರಂಭಿಸಿ, ಮೊದಲನೇ ತರಗತಿಯಲ್ಲಿ ಗ್ರಾಮೀಣ ಮಕ್ಕಳಿಗೆ ಡಿಜಿಟಲ್ ಎಜುಕೇಶನ ಕಲಿಸುವುದು ಇಂದು ಅನಿವಾರ್ಯವಾಗಿದೆ. ಕಾಳಿಂಗಪ್ಪ ವೆಲ್‌ಫೇರ್ ಅಸೋಸಿಯೇಷನ್ ವತಿಯಿಮದ ಪ್ರತಿ ವರ್ಷ ಮೂರರಿಂದ ನಾಲ್ಕು ಸ್ಮಾರ್ಟ್ ಕ್ಲಾಸ್‌ಗಳನ್ನು ಪ್ರಾರಂಭಿಲಾಗುತ್ತದೆ. ಇದು ೧೪ನೇ ಸ್ಮಾರ್ಟ್ ಕ್ಲಾಸ್ ಆಗಿದ್ದು, ೧೧ ಸ್ಮಾರ್ಟ್ ಕ್ಲಾಸ್‌ಗಳು ಆಲೂರು ತಾಲೂಕಿನಲ್ಲಿ ಪ್ರಾರಂಭಿಸಲಾಗಿದೆ. ಸುಮಾರು ೫೦೦ಕ್ಕೂ ಹೆಚ್ಚು ಮಕ್ಕಳು ಕಂಪ್ಯೂಟರ್ ಕಲಿಯುವ ವ್ಯವಸ್ಥೆ ಮಾಡಿದ್ದಾರೆ ಎಂದರು.
ನಿವೃತ್ತ ಶಿಕ್ಷಕಿ, ಸಮಾಜ ಸೇವಕಿ, ಸ್ಕೌಟ್ಸ್ ಅಂಡ್ ಗೈಡ್ಸ್ ಮುಖ್ಯಸ್ತೆ ಕಾಂಚನಮಾಲರವರು, ಮಂಜುನಾಥ್ ಕಾಳಿಂಗಪ್ಪರವರ ಸೇವೆ ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವ ಕಾಳಜಿಗೆ ಅಭಿನಂದಿಸಬೇಕು. ಇಂತಹ ಸೇವಾ ಕಾರ್ಯ ರಾಜ್ಯದಲ್ಲಿ ಮೊದಲು ಎನಿಸುತ್ತದೆ. ಈ ಸ್ಮಾರ್ಟ್ ಕ್ಲಾಸ್‌ನಲ್ಲಿ ಒಂದು ಲ್ಯಾಪ್‌ಟಾಪ್, ಪ್ರೊಜೆಕ್ಟರ್, ಒಂದು ಪ್ರಿಂಟರ್, ಎರಡು ಕಂಪ್ಯೂಟರ್, ಸ್ಪೀಕರ್ಸ್, ಪ್ರೊಜೆಕ್ಟ್ ಸ್ಟ್ಯಾಂಡ್ ಉಚಿತವಾಗಿ ನೀಡುತ್ತಿರುವುದನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಗಿರೀಶ್, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷ ಪರಮೇಶ್, ದಿವಾಕರ್, ಮಂಜುನಾಥ್, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಭಾಗವಹಿಸಿದ್ದರು.