ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ

| Published : Nov 20 2024, 12:31 AM IST

ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್‌ಬೈಲ್ ತಲಕಾವೇರಿ ಜ್ಞಾನ ವಿಕಾಸ ಸಮಿತಿ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಪೋಷಕರು ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬೇಡಿ ಅಪ್ರಾಪ್ತ ವಯಸ್ಸಿನ ವಾಹನ ಚಾಲನೆ ಪೊಲೀಸ್ ಮತ್ತು ಥವಾ ಸಾರಿಗೆ ಅಧಿಕಾರಿಗಳಿಗೆ ಸಿಕ್ಕಿಬಿದ್ದರೆ ಪೋಷಕರು ರು.25 ಸಾವಿರ ದಂಡ ಹಾಗೂ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯ ಪೇದೆ ವಿವೇಕ್ ಎಚ್ಚರಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್‌ಬೈಲ್ ತಲಕಾವೇರಿ ಜ್ಞಾನ ವಿಕಾಸ ಸಮಿತಿ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ಮಂಜಿಕೆರೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಾಹನಗಳನ್ನು ರಸ್ತೆಯಲ್ಲಿ ಚಲಾಯಿಸುವಾಗ ಚಾಲಕರು ದ್ವಿಚಕ್ರ ಸವಾರರು ವಾಹನಗಳ ಚಾಲನೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಹೊಂದಿರಬೇಕು. ಅದೇ ರೀತಿಯಲ್ಲಿ ವಾಹನ ಚಾಲನಾ ಪರವಾನಗಿ ಹಾಗೂ ಜೀವವಮೆ ಪಾವತಿಸಿರಬೇಕು. ವಾಹನಕ್ಕೆ ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ವಾಹನದಲ್ಲಿರಿಸಿಕೊಳ್ಳಬೇಕು. ವಾಹನ ಚಾಲನೆಯಲ್ಲಿ ತೊಡಗಿಸಿಕೊಂಡಾಗ ಅವಘಡ, ಅನಾಹುತಗಳು ಸಂಭವಿಸಿದರೂ ನಿಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಮಾಲಿನಿ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್‌ಬೈಲ್ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತೀಜ, ಸೇವಾಪ್ರತಿನಿಧಿ ಯಶೋಧಾ ಮಾತನಾಡಿದರು.

ಭೂಮಿಕಾ ತಂಡದ ಸದಸ್ಯರು ಜವಬ್ದಾರಿ ನಿರ್ವಹಿಸಿದರು.