ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಗಾರ

| Published : Nov 24 2025, 03:15 AM IST

ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಗಾರ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ನಡೆಯಿತು. ಟಿ ಎಂ ಶಾಹಿದ್‌ ತೆಕ್ಕಿಲ್‌ ಕಟ್ಟಡ ಕಾರ್ಮಿಕರ ಕಾರ್ಯಾಗಾರ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಂಪಾಜೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಮತ್ತು ಮಂಗಳೂರು ವಿಭಾಗ ವತಿಯಿಂದ ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಆಯೋಜಿಸಲಾಯಿತು.

ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಕಟ್ಟಡ ಕಾರ್ಮಿಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ರಾಜ್ಯದಲ್ಲಿ ಸುಮಾರು 134 ವಲಯಗಳ 2.5 ಕೋಟಿ ಕಾರ್ಮಿಕರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಾರ್ಮಿಕರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು ಸರಕಾರ ಕಾರ್ಮಿಕ ಹಿತಾಸಕ್ತಿಗೆ ಪೂರಕವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಮತಿ ಶಕ್ತಿವೇಲು ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ನಾರಾಯಣ ಕಿಳಂಗೋಡಿ, ರಿಯಾಸ್ ಉಳ್ಳಾಲ ಮಾಹಿತಿ ನೀಡಿದರು. ಕಾರ್ಮಿಕ ಅಧಿಕಾರಿ ಗಣಪತಿ ಹೆಗ್ಡೆ ಹಾಗೂ ಕಾರ್ಮಿಕ ಮುಖಂಡ ಶ್ರೀಧರ್ ಕಡೆಪಾಲ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.