ಪ್ರಧಾನಿ ಮೋದಿ ಅವರು ಮೂರನೇ ಎರಡು ಬಹುಮತ ಇಲ್ಲದಿದ್ದರೂ ರಾಜಕೀಯ ಲಾಭಕ್ಕಾಗಿ ಮಹಿಳೆ ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳನ್ನು ಒಟ್ಟಿಗೆ ಜಾರಿಗೆ ತರಲು ಮುಂದಿಟ್ಟು ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಲ್ಲಿಸಲು ಪ್ರಯತ್ನಿಸಿದ್ದರು. ಇದರಿಂದ ಕೇಂದ್ರ ಸರ್ಕಾರಕ್ಕೆ ಸೋಲಾಗಿದೆ. ಮಹಿಳೆ ಮೀಸಲು ತಂದಿದ್ದೆ ಕಾಂಗ್ರೆಸ್ ಇದನ್ನು ಕೇಂದ್ರ ಮರೆತಿರುವುದು ಹಾಸ್ಯಸ್ಪದ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ಹೆಸರಿನಲ್ಲಿ ದಕ್ಷಿಣ ಭಾರತ ರಾಜ್ಯಗಳಿಗೆ ಅನ್ಯಾಯ ಮಾಡಲು ಕ್ಷೇತ್ರ ಪುನರ್ ವಿಂಗಡಣೆಯ ಬಿಲ್ ಪಾಸ್ ಮಾಡಲು ತಂತ್ರ ರೂಪಿಸಿತ್ತು. ಅದಕ್ಕೆ ಸೋಲಾಗಿದೆ. ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ಕೆ.ಎಂ.ಉದಯ್ ಸ್ಪಷ್ಟಪಡಿಸಿದರು.

ಸಮೀಪದ ಎಚ್.ಹಾಗಲಹಳ್ಳಿ ಗೇಟ್ ಬಳಿ ಕಾವೇರಿ ನೀರಾವರಿ ನಿಗಮದಿಂದ ಸುಮಾರು 2.5 ಕೋಟಿ ರು. ವೆಚ್ಚದಲ್ಲಿ ಹೆಬ್ಬಾಳ ಚೆನ್ನಯ್ಯ ನಾಲೆಯ 19ನೇ ವಿತರಣಾ ನಾಲೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಪ್ರಧಾನಿ ಮೋದಿ ಅವರು ಮೂರನೇ ಎರಡು ಬಹುಮತ ಇಲ್ಲದಿದ್ದರೂ ರಾಜಕೀಯ ಲಾಭಕ್ಕಾಗಿ ಮಹಿಳೆ ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳನ್ನು ಒಟ್ಟಿಗೆ ಜಾರಿಗೆ ತರಲು ಮುಂದಿಟ್ಟು ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಲ್ಲಿಸಲು ಪ್ರಯತ್ನಿಸಿದ್ದರು. ಇದರಿಂದ ಕೇಂದ್ರ ಸರ್ಕಾರಕ್ಕೆ ಸೋಲಾಗಿದೆ. ಮಹಿಳೆ ಮೀಸಲು ತಂದಿದ್ದೆ ಕಾಂಗ್ರೆಸ್ ಇದನ್ನು ಕೇಂದ್ರ ಮರೆತಿರುವುದು ಹಾಸ್ಯಸ್ಪದ ಎಂದು ಟೀಕಿಸಿದರು.

ಜನಸಂಖ್ಯಾ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿವೆ. ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿ ಕ್ಷೇತ್ರ ಪುನರ್ ವಿಂಗಡಣೆಯಿಂದ ಉತ್ತರ ಭಾರತದ ರಾಜ್ಯಗಳಿಗೆ ಅನುಕೂಲವಾಗುತ್ತವೆ. ದಕ್ಷಿಣ ಭಾರತ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದರು.

ಕಾಂಗ್ರೆಸ್ ಪಕ್ಷವನ್ನು ಸಚಿವ ಜಮೀರ್ ಸೇರಿದಂತೆ ಯಾವ ನಾಯಕರು ತೊರೆಯುವ ಪ್ರಶ್ನೆಯೇ ಇಲ್ಲ. ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂದರು.

ಹೆಬ್ಬಾಳ ಚೆನ್ನಯ್ಯ ನಾಲೆ ತುಂಬಾ ಹಳೆ ನಾಲೆ. ಶಿಥಿಲ ವ್ಯವಸ್ಥೆಗೆ ತಲುಪಿತ್ತು. ಈ ಭಾಗದ ರೈತರ ಬೆಳೆಗಳಿಗೆ ನೀರಿನ ಸಮಸ್ಯೆ ಎದುರಾಗಿತ್ತು. ಕೊನೇ ಭಾಗಕ್ಕೆ ನೀರು ಸರಬರಾಜು ಆಗದೆ ತೊಂದರೆಯಾಗಿತ್ತು. ರೈತರು ಸಾಕಷ್ಟು ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರದಿಂದ ಅನುದಾನ ತಂದು ನಾಲೆ ಹಾಗೂ ರಸ್ತೆ ಅಭಿವೃದ್ಧಿ ಪಡಿಸಲು ಚಾಲನೆ ನೀಡಲಾಗಿದೆ ಎಂದರು.

ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಕಾವೇರಿ ನೀರಾವರಿ ನಿಗಮದ ಎಇಇ ಪ್ರಶಾಂತ್, ಎಇ ಶಿವಕುಮಾರ್, ಮುಖಂಡರಾದ ಕೆಂಪರಾಜು, ಇಂದ್ರಕುಮಾರ್ ಮಹೇಶ್, ಬ್ಯಾಂಕ್ ಶಿವಣ್ಣ, ಹೊನ್ನಯನಹಳ್ಳಿ ಮಹೇಂದ್ರ, ಪುನೀತ್, ಮಧುಕರ್. ವಿಜಯ್, ಪುಟ್ಟಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.