ಎಲ್ಲಾ ರಾಜಕೀಯ ಪಕ್ಷಗಳಿಂದ ಕಾಡುಗೊಲ್ಲರ ಮೂಗಿಗೆ ಎಸ್ಟಿ ಪಟ್ಟಿ ತುಪ್ಪ: ಜಿ.ಕೆ.ನಾಗಣ್ಣ

| Published : Apr 08 2024, 01:03 AM IST

ಎಲ್ಲಾ ರಾಜಕೀಯ ಪಕ್ಷಗಳಿಂದ ಕಾಡುಗೊಲ್ಲರ ಮೂಗಿಗೆ ಎಸ್ಟಿ ಪಟ್ಟಿ ತುಪ್ಪ: ಜಿ.ಕೆ.ನಾಗಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ರಾಜಕೀ ಯ ಪಕ್ಷಗಳ ಮುಖಂಡರು ಕಾಡುಗೊಲ್ಲರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ಕೇಂದ್ರದಲ್ಲಿರುವ ಎಸ್ಟಿ ಮೀಸಲಾತಿ ಪಟ್ಟಿಗೆ ಕಾಡುಗೊಲ್ಲರನ್ನು ಸೇರಿಸಲು ಶ್ರಮಿಸುವ ವ್ಯಕ್ತಿಗಳಿಗೆ ಕಾಡುಗೊಲ್ಲರ ಬೆಂಬಲ ಸಿಗಲಿದೆ ಎಂದು ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿ ಅಧ್ಯಕ್ಷ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರುಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ರಾಜಕೀ ಯ ಪಕ್ಷಗಳ ಮುಖಂಡರು ಕಾಡುಗೊಲ್ಲರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ಕೇಂದ್ರದಲ್ಲಿರುವ ಎಸ್ಟಿ ಮೀಸಲಾತಿ ಪಟ್ಟಿಗೆ ಕಾಡುಗೊಲ್ಲರನ್ನು ಸೇರಿಸಲು ಶ್ರಮಿಸುವ ವ್ಯಕ್ತಿಗಳಿಗೆ ಕಾಡುಗೊಲ್ಲರ ಬೆಂಬಲ ಸಿಗಲಿದೆ ಎಂದು ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿ ಅಧ್ಯಕ್ಷ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಅಲ್ಲದೆ ರಾಜ್ಯದ ಸುಮಾರು 37 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಡುಗೊಲ್ಲರು ನಿರ್ಣಾಯಕ ಮತದಾರರಾಗಿದ್ದಾರೆ. ಆದರೆ ಪ್ರತಿಬಾರಿ ಚುನಾ ವಣೆಯ ವೇಳೆ ಕಾಡುಗೊಲ್ಲರನ್ನು ಎಸ್ಟಿ ಮೀಸಲಾತಿ ಪಟ್ಟಿಗೆ ಸೇರಿಸುವ ನಾಟಕ ಮಾಡುವ ರಾಜಕೀಯ ಪಕ್ಷಗಳು, ಚುನಾವ ಣೆ ನಂತರ ಈ ವಿಚಾರವಾಗಿ ಚಕಾರ ಕೂಡ ಎತ್ತುವುದಿಲ್ಲ. ೨೦೨೦ರ ಶಿರಾ ವಿಧಾನಸಭಾ ಉಪಚುನಾವಣೆಯ ವೇಳೆ ಅಸ್ಥಿತ್ವಕ್ಕೆ ಬಂದ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಇದುವರೆಗೂ ಸಮರ್ಪಕವಾಗಿ ಕಾರ್ಯಾರಂಭವಾಗಿಲ್ಲ. ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಗೊಲ್ಲರ ಅಭಿವೃದ್ಧಿ ನಿಗಮವಾಗಿ ಬದಲಾಯಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಬಂದಿದೆ. ಆದರೆ ಸಂಘದ ನಿರಂತರ ಹೋರಾಟದ ಫಲವಾಗಿ ಅದು ಸಾಧ್ಯವಾಗಿಲ್ಲ ಎಂದು ದೂರಿದರು.ತುಮಕೂರು ಜಿಲ್ಲೆಯಲ್ಲಿ ಕಾಡುಗೊಲ್ಲ ಸಮುದಾಯದ ಸುಮಾರು ೨ ಲಕ್ಷ ಮತದಾರರಿದ್ದಾರೆ. ಕಾಡುಗೊಲ್ಲ ಸಮುದಾಯದ ಪ್ರಮುಖ ಮುಖಂಡರು ಶೀಘ್ರದಲ್ಲಿಯೇ ಸಭೆ ನಡೆಸಿ, ಯಾವ ಪಕ್ಷದಿಂದ ಕಾಡುಗೊಲ್ಲ ಸಮುದಾಯಕ್ಕೆ ಸಂವಿಧಾನಾತ್ಮಕ ಮೀಸಲಾತಿ ಪಡೆಯಲು ಅನುಕೂಲವಾಗುತ್ತದೆಯೋ ಅಂತಹ ಪಕ್ಷವನ್ನು ಬೆಂಬಲಿಸುವ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.೧೭ನೇ ಲೋಕಸಭೆಯ ಕೊನೆಯ ಅಧಿವೇಶನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾಡುಗೊಲ್ಲ ಸಮುದಾಯ ವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಕುರಿತು ಸುಧೀರ್ಘವಾಗಿ ರಾಜ್ಯಸಭೆಯಲ್ಲಿ ಮಾತನಾಡಿದವರು, ನರೇಂದ್ರ ಮೋದಿ ನೇತೃತ್ವ ದ ಸರ್ಕಾರ ಸ್ಪಂದಿಸಲಿಲ್ಲ.ರಾಜ್ಯದಲ್ಲಿ ಸುಮಾರು 37 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತಗಳು ನಿರ್ಣಾಯಕವಾ ಗಿದ್ದರೂ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಒಬ್ಬರಿಗೂ ಟಿಕೆಟ್ ನೀಡಲಿಲ್ಲ. ಕಾಂಗ್ರೆಸ್ ಅಥವಾ ಬಿಜೆಪಿ ಎರಡು ಪಕ್ಷಗಳಿಂದ ಕಾಡುಗೊಲ್ಲರಿಗೆ ಯಾವುದೇ ಒಳ್ಳೆಯ ಕೆಲಸಗಳು ಆಗಿಲ್ಲ. ಇದರಿಂದ ನಮ್ಮ ಸಮುದಾಯದ ಮತದಾರರು ಗೊಂದಲದಲ್ಲಿದ್ದಾರೆ ಎಂದು ಜಿ.ಕೆ.ನಾಗಣ್ಣ ನುಡಿದರು.ಸುದ್ದಿಗೋಷ್ಠಿಯಲ್ಲಿ ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿಯ ಸುನಿಲ್ ಕುಮಾರ್ ಉಪಸ್ಥಿತರಿದ್ದರು.