ಸಾರಾಂಶ
ಪ್ರತಿ ಬಾರಿ 3-4 ವಿದ್ಯಾರ್ಥಿಗಳು ಟಾಪರ್ ಇರುತ್ತಿದ್ದರು, ಆದರೆ ಈ ಬಾರಿ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಾಪರ್ ಗಳಾಗಿದ್ದಾರೆ. ಪರೀಕ್ಷೆಗೂ ಮುನ್ನ ಪೇಪರ್ ಲೀಕ್ ಔಟ್ ಆಗಿದೆ ಎಂದು ಹಲವು ವಿದ್ಯಾರ್ಥಿಗಳು ಆರೋಪಿಸಿದ್ದು, ಬೇರೆ ರಾಜ್ಯಗಳಲ್ಲಿ ಅರ್ಧ ಗಂಟೆ ತಡವಾಗಿ ಪೇಪರ್ ಬಂದಿದೆ.
ಕನ್ನಡಪ್ರಭ ವಾರ್ತೆ ಮಾಗಡಿ
ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ತಾಲೂಕು ಅಧ್ಯಕ್ಷ ಎನ್.ಎಂ. ಹರೀಶ್ ಒತ್ತಾಯಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆಯಿಂದ ಸಾಕಷ್ಟು ಅಕ್ರಮಗಳು ಕೇಳಿ ಬರುತ್ತಿದ್ದು, ಕೂಡಲೇ ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಒತ್ತಡ ತಂದು ತನಿಖೆ ನಡೆಸಿ, ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಪರೀಕ್ಷೆಯಿಂದ ರಾಜ್ಯಗಳಿಗೆ ಸಿಗಬೇಕಾದ 15% ಮೀಸಲಾತಿಯಲ್ಲಿ ತುಂಬಾ ಅನ್ಯಾಯವಾಗಿದೆ, ಪ್ರತಿ ಬಾರಿ 3-4 ವಿದ್ಯಾರ್ಥಿಗಳು ಟಾಪರ್ ಇರುತ್ತಿದ್ದರು, ಆದರೆ ಈ ಬಾರಿ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಾಪರ್ ಗಳಾಗಿದ್ದಾರೆ. ಪರೀಕ್ಷೆಗೂ ಮುನ್ನ ಪೇಪರ್ ಲೀಕ್ ಔಟ್ ಆಗಿದೆ ಎಂದು ಹಲವು ವಿದ್ಯಾರ್ಥಿಗಳು ಆರೋಪಿಸಿದ್ದು, ಬೇರೆ ರಾಜ್ಯಗಳಲ್ಲಿ ಅರ್ಧ ಗಂಟೆ ತಡವಾಗಿ ಪೇಪರ್ ಬಂದಿದೆ, ಒಂದೇ ಪರೀಕ್ಷಾ ಕೇಂದ್ರದಲ್ಲಿ 6 ಜನ ವಿದ್ಯಾರ್ಥಿಗಳು 720/720 ಪಡೆದಿದ್ದಾರೆ, ಕಠಿಣ ಪರೀಕ್ಷೆಯಲ್ಲಿ ಇದು ಹೇಗೆ ಸಾಧ್ಯ? ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕನಸು ಕಮರಿ ಹೋಗಿದೆ, ನೊಂದು ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವ ಹೊಣೆ ಯಾರದು?
ಇದರಿಂದ ನಮ್ಮ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ಸರ್ಕಾರ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಹಾಗೂ ರಾಜ್ಯಗಳಿಗೆ ಅನುಕೂಲ ಆಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.