ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ತಮಟೆ ಚಳುವಳಿ ನಡೆಸಿದರು. ಈ ವೇಳೆ ಬಸವೇಶ್ವರ ವೃತ್ತದಿಂದ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಮನೆ ಮುಂದೆ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಬಳಿಕ, ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ತಮಟೆ ಚಳುವಳಿ ನಡೆಸಿದರು. ಈ ವೇಳೆ ಬಸವೇಶ್ವರ ವೃತ್ತದಿಂದ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಮನೆ ಮುಂದೆ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಬಳಿಕ, ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಈ ವೇಳೆ ದಲಿತ ಮುಖಂಡ ಬಸವರಾಜ ಸಿದ್ದಾಪೂರ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಒಳಮಿಸಲಾತಿ ಅನುಷ್ಠಾನಕ್ಕೆ ಒತ್ತಾಯಿಸುವುದಾಗಿ ಹೇಳಿದ್ದರು. ಆದರೆ, ಸರ್ಕಾರ ಬಂದು ಒಂದೂವರೆ ವರ್ಷಗಳಾದರೂ ಯಾರು ಪ್ರಯತ್ನಿಸುತ್ತಿಲ್ಲ. ನಮಗೆ ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.ವಿಷಯ ತಿಳಿದು ಹೋರಾಟದ ಸ್ಥಳಕ್ಕೆ ಆಗಮಿಸಿದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಈ ಮಿಸಲಾತಿ ವಿಷಯದ ಬಗ್ಗೆ ಕೇಂದ್ರ ಸರ್ಕಾರದ ಅಧೀನದಲ್ಲಿ ನಿರ್ಣಯ ಕೈಗೊಳ್ಳಬೇಕು.ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ದಲಿತ ಸಮಾಜ ಬಾಂಧವರು ಹೋರಾಟಗಾರರು ಜ್ಞಾನವಂತರು. ತಾವೇಲ್ಲ ಸಂವಿಧಾನದ ಬಗ್ಗೆ ಅರಿತವರಿದ್ದೀರಿ. ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂಬ ಕಾರಣ ಒಳ ಮೀಸಲಾತಿ ಜಾರಿಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ಅದರಂತೆ ನಾನೂ ಕೂಡ ನಿಮ್ಮ ಪರವಾಗಿದ್ದೇನೆ. ಇದರಲ್ಲಿ ಎರಡು ಮಾತಿಲ್ಲ. ನಿಜವಾದ ತುಳಿತಕ್ಕೊಳಗಾದ ಸಮಾಜಗಳ ಪರವಾಗಿ ಸದನದಲ್ಲಿ ಧ್ವನಿ ಎತ್ತುವ ಮೂಲಕ ಸರ್ಕಾರದ ಗಮನ ಸೆಳೆಯುವಲ್ಲಿ ಪ್ರಾಮಾಣಿಕವಾಗಿ ಪ್ರಯುತ್ನಿಸುತ್ತೇನೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ನಾಯಕರು ದಲಿತ ಸಮಾಜದ ಮೇಲೆ ಅಪಾರವಾದ ಕಾಳಜಿ ಹೊಂದಿದ್ದಾರೆ. ಒಳ ಮೀಸಲಾತಿ ಕೊಟ್ಟಿ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಸುಭಾಷ ಕಟ್ಟಿಮನಿ, ಮಾರುತಿ ಸಿದ್ದಾಪೂರ, ಮುತ್ತು ಅಮರಗೋಳ, ಶ್ರೀನಾಥ ಭೈರವಾಡಗಿ, ಮುದುಕಪ್ಪ ಗರಸಂಗಿ, ರಮೇಶ ಕಂದಗನೂರ, ಶಿವು ನಾಲತವಾಡ, ರಾಮು ತಂಬೂರಿ, ಬಾಲಚಂದ್ರ ಹುಲ್ಲೂರ, ದೇವೇಂದ್ರ ಡೊಂಕಮಡು, ಮಹಾಂತೇಶ ಕಾಳಗಿ, ಮಂಜುನಾಥ ಚಲವಾದಿ, ರಾವುತಪ್ಪ ಕಾಳಗಿ, ಆನಂದ ಮೂದುರ, ಭೀಮರಾವ ಕೋಳೂರ, ಲಕ್ಷ್ಮಣ ಕಳಗಿ ಸೇರಿದಂತೆ ಹಲವರು ಇದ್ದರು.