ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಇನ್ನರ್ ವ್ಹಿಲ್ ಕ್ಲಬ್ ಆಫ್ ಮೈಸೂರು ಮತ್ತು ಶ್ರೀ ಮಹಾಗಣಪತಿ ದೇವಸ್ಥಾನ ಸೇವಾ ಟ್ರಸ್ಟ್ ಸಹಯೋಗದಲ್ಲಿ ಮಹಿಳೆಯರಿಗೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಬೃಂದಾವನ ಬಡಾವಣೆಯ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿತ್ತು.ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅನುಭವಿ ವೈದ್ಯರ ತಂಡದಿಂದ ಹಮ್ಮಿಕೊಂಡಿದ್ದ ಶಿಬಿರಕ್ಕೆ ಮಹಾಗಣಪತಿ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಎಲ್. ಅರುಣ್ ಕುಮಾರ್ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಪಲ್ಲವಿ ಅರುಣ್ ಕುಮಾರ್, ಕಾರ್ಯದರ್ಶಿ ಸುಮತಿ ಚಾಲನೆ ನೀಡಿದರು.ಶಿಬಿರದಲ್ಲಿ 40 ವರ್ಷ ಮೆಲ್ಪಟ್ಟ ಮಹಿಳೆಯರಲ್ಲಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಇರುವಿಕೆಯನ್ನ್ತುಕಂಡುಬರುವ ಲಕ್ಷಣಗಳ ಮೂಲಕ ಪತ್ತೆ ಹಚ್ಚಲು ವಿವಿಧ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು, ಕ್ಯಾನ್ಸರ್ ಲಕ್ಷಣ ಕಂಡು ಬಂದವರಿಗೆ ಚಿಕಿತ್ಸೆ ಕುರಿತು ಅಗತ್ಯ ಸಲಹೆ ಸೂಚನೆಯನ್ನು ವೈದ್ಯರ ತಂಡದಿಂದ ನೀಡಲಾಯಿತು.ಎರಡೂ ದಿನಗಳಲ್ಲಿ ಸುಮಾರು 185 ಮಹಿಳೆಯರು ಶಿಬಿರದಲ್ಲಿ ಭಾಗವಹಿಸಿ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಂಡರು.ಶಿಬಿರ ಉದ್ಘಾಟನೆ ಬಳಿಕ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಎಲ್. ಅರುಣ್ ಕುಮಾರ್, ಇತ್ತೀಚೆಗೆ ಮಹಿಳೆಯರಲ್ಲಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತಿವೆ, ಆರಂಭದಲ್ಲೇ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗುತ್ತಾರೆ. ಆದರೆ ಕಾಯಿಲೆಯ ಲಕ್ಷಣಗಳ ಬಗ್ಗೆ ಅರಿವಿಲ್ಲದೆ ಹಾಗೂ ಆರ್ಥಿಕ ಸಮಸ್ಯೆಯಿಂದ ಪರೀಕ್ಷೆ ಮಾಡಿಸಿಕೊಳ್ಳದೆ ನಂತರದಲ್ಲಿ ಸಾವು ನೋವು ಸಂಭವಿಸುತ್ತಿವೆ ಎಂದರು.ಈ ಹಿನ್ನೆಲೆಯಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು, ಮಹಿಳೆಯರು ಇದರ ಸದುಪಯೋಗಪಡಿಸಿಕೊಲು ಮನವಿ ಮಾಡಿದರು.ಸಮಾರೋಪದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಪಲ್ಲವಿ ಅರುಣ್ ಕುಮಾರ್ ಮಾತನಾಡಿ, ಕುಟುಂಬದಲ್ಲಿ ಮಹಿಳೆಯರು ಆರೋಗ್ಯವಾಗಿದ್ದರೆ ಇಡೀ ಜವಾಬ್ದಾರಿ ನಿಭಾಯಿಸುತ್ತಾಳೆ. ಕೌಟುಂಬಿಕ ಹಾಗೂ ಕೆಲಸದ ಒತ್ತಡಗಳ ನಡುವೆ ತನ್ನ ಆರೋಗ್ಯದ ಬಗ್ಗೆ ಗಮನಹರಿಸುತ್ತಿಲ್ಲ. ನಂತರ ಅನಾರೋಗ್ಯದ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡ ಮೇಲೆ ಚಿಕಿತ್ಸೆ ಪಡೆದುಕೊಂಡರೆ ಪ್ರಯೋಜನವಾಗುವುದಿಲ್ಲ. ಒತ್ತಡವನ್ನು ಬದಿಗೊತ್ತಿ ತಮ್ಮ ಆರೋಗ್ಯದ ಬಗ್ಗೆ ಮಹಿಳೆಯರು ಗಮನಹರಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಕ್ಲಬ್ ನ ಶಶಿಕಲಾ, ಲಲಿತಾ ರಂಗನಾಥ್, ರೆಡ್ ಕ್ರಾಸ್ ಸಂಸ್ಥೆಯ ಡಾ. ಶ್ಯಾಮ್ ಸುಂದರ್, ಡಾ, ಭಾಸ್ಕರ್, ಶೇಷಗಿರಿ, ಸುರೇಶ್ ಗೌಡು, ಹರೀಶ್, ಕೀರ್ತಿಕುಂಬಾರ್, ಚಂದ್ರಶೇಖರ್, ಎಟಿಎಂಇ ಎನ್.ಎಸ್.ಎಸ್. ಸ್ವಯಂ ಸೇವಕರು ಇದ್ದರು.