ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಒಎಲ್‌ವಿ ಕಾನ್ವೆಂಟ್‌ನಲ್ಲಿ ಹೆಣ್ಣುಮಕ್ಕಳ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಈಚೆಗೆ ಆಯೋಜಿಸಲಾಗಿತ್ತು.

ಸೋಮವಾರಪೇಟೆ : ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಒಎಲ್‌ವಿ ಕಾನ್ವೆಂಟ್‌ನಲ್ಲಿ ಹೆಣ್ಣುಮಕ್ಕಳ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಈಚೆಗೆ ಆಯೋಜಿಸಲಾಗಿತ್ತು.

ಕಾನ್ವೆಂಟ್‌ನ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ದಯಾ ಹಾಗೂ ಶಾಲೆಯ ಎಲ್ಲ ಸಿಬ್ಬಂದಿ ಮತ್ತು ತರಗತಿ ಶಿಕ್ಷಕರು ಭಾಗವಹಿಸಿದರು.

ನಾವು ಪ್ರತಿಷ್ಠಾನ ಸಂಸ್ಥೆಯ ಕಾರ್ಯಕಾರಿ ಮಂಡಳಿ ಕಾರ್ಯದರ್ಶಿ ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಸುಮನಾ ಮ್ಯಾಥ್ಯು ಅವರು ಮುಟ್ಟಿನ ಚಕ್ರ, ಹೆಣ್ಣುಮಕ್ಕಳು ಹಾಗೂ ಮಹಿಳೆಯರು ಎದುರಿಸುವ ಆರೋಗ್ಯ ಸಮಸ್ಯೆಗಳು ಮತ್ತು ಮುಟ್ಟಿನ ಸಮಯದಲ್ಲಿ ಅನುಸರಿಸಬೇಕಾದ ಸ್ವಚ್ಛತೆ ಹಾಗೂ ವೈಯಕ್ತಿಕ ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು.

ಹೆಣ್ಣುಮಕ್ಕಳಲ್ಲಿ ಮುಟ್ಟಿನ ಕುರಿತು ಇರುವ ಹಿಂಜರಿಕೆ ಮತ್ತು ತಪ್ಪು ಕಲ್ಪನೆಗಳನ್ನು ನಿವಾರಿಸಿ, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಕ್ಲಬ್ ಅಧ್ಯಕ್ಷೆ ಲತಾ ಮಂಜು ಹೇಳಿದರು.ಕಾನ್ವೆಂಟ್‌ನ ಮುಖ್ಯ ಶಿಕ್ಷಕಿ ಸಿಸ್ಟರ್ ದಯಾ, ಕ್ಲಬ್‌ನ ಪದಾಧಿಕಾರಿಗಳಾದ ಲತಾ ನಾಗೇಶ್, ದಿವ್ಯ ದಯಾಕರ್ ಮತ್ತಿತರರು ಇದ್ದರು.