ಸಾರಾಂಶ
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಲ ಗ್ರಾಮದ ಶಬ್ಬೀರ್ ಅಹಮ್ಮದ್ ಎಂಬುವರ ಪತ್ನಿ ಶಫಿಯಾ (೪೮) ಹಾಗೂ ಪುತ್ರ ಶಫೀಕ್ ( ೨೧) ಎಂಬುವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಕಾರಿನಲ್ಲಿ ಮೂವರು ಮಕ್ಕಳು ಸೇರಿ ೬ ಜನರಿದ್ದು, ಎಲ್ಲರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಸೋಮವಾರ ಮದುವೆ ಔತಣಕೂಟವೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಮಂಗಳವಾರ ಮುಂಜಾನೆ ೬.೩೦ರ ವೇಳೆ ಮಂಗಳೂರು ಕಡೆಯಿಂದ ಬೆಂಗಳೂರಿಗೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತಪಟ್ಟ ಶಫೀಕ್ ಮಂಗಳೂರಿನ ಕೊಣಾಜೆಯ ಪಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಿಪ್ಲೋಮಾ ಓದುತ್ತಿದ್ದು ಸ್ವತಃ ಕಾರನ್ನು ಚಲಾಯಿಸುತ್ತಿದ್ದ ಎನ್ನಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.