ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಅಭದ್ರತೆ: ಬರಗೂರು ರಾಮಚಂದ್ರಪ್ಪ

| Published : Apr 26 2024, 01:30 AM IST

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಅಭದ್ರತೆ: ಬರಗೂರು ರಾಮಚಂದ್ರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಅವಿರತ ಹರೀಶ್‌ 60ರ ಸಾಂಸ್ಕೃತಿಕ ಸಂಭ್ರಮ ಆಯೋಜಿಸಲಾಗಿತ್ತು. ಈ ವೇಳೆ ಹರೀಶ್ ಮತ್ತು ದಂಪತಿಯನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಶ್ರಮಿಕರಿಗೆ ಕೆಲಸದ ಭದ್ರತೆ ಇಲ್ಲದಿದ್ದರೆ ಜೀವನ ನಿರ್ವಹಣೆ ಕಷ್ಟ ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಅಭಿಪ್ರಾಯಪಟ್ಟರು.

ಗುರುವಾರ ಕನ್ನಡ ಭವನದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಅವಿರತ ಹರೀಶ್‌ 60 ಸಾಂಸ್ಕೃತಿಕ ಸಂಭ್ರಮದಲ್ಲಿ ನಗಾರಿ ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶ್ರಮಿಕ ಜೀವನದಿಂದ ಸಾಂಸ್ಕೃತಿಕ ಲೋಕಕ್ಕೆ ಜಿಗಿಯುವುದು ಸುಲಭದ ಕೆಲಸವಲ್ಲ. ಶ್ರಮದಿಂದಲೇ ಸಾಹಿತ್ಯ, ಸಾಂಸ್ಕೃತಿಕ ಲೋಕಕ್ಕೆ ಬರುವವರ ಸಂಖ್ಯೆ ಬಹಳ ಕಡಿಮೆ. ಆದರೆ ಹರೀಶ್‌ ಅವರ ಅವಿರತ ಪರಿಶ್ರಮವೇ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಜನಪ್ರಿಯತೆಗೆ ಮೂಲ ಕಾರಣ ಎಂದರು.

ಪತ್ರಕರ್ತ ಜಿ.ಎನ್.ಮೋಹನ್, ಸಾಹಿತಿ ಡಾ। ರಾಜಶೇಖರ ಮಠಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶ್ರಾಂತ ಜಂಟಿ ನಿರ್ದೇಶಕ ಟಿ.ಎಸ್‌.ದಕ್ಷಿಣಾಮೂರ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಎನ್‌.ಕರಿಯಪ್ಪ, ಲೇಖಕ ಅವಿರತ ಹರೀಶ್ ಉಪಸ್ಥಿತರಿದ್ದರು.