ಆಯುರ್ವೇದ ಜೊತೆ ಅವಶ್ಯಕ ಆಲೋಪತಿ ಬಳಕೆಯ ಅವಕಾಶಕ್ಕೆ ಒತ್ತಾಯ

| Published : Dec 23 2023, 01:45 AM IST

ಸಾರಾಂಶ

ಆಯುಷ್ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು ಈಗಾಗಲೇ ಮಹಾರಾಷ್ಟ್ರ ಮತ್ತು ಹಲವು ರಾಜ್ಯಗಳಲ್ಲಿ ಕಾಯ್ದೆಯಡಿ ಅವಕಾಶ ಇದೆ. ನಮ್ಮ ರಾಜ್ಯದಲ್ಲಿಯೂ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಆಯುರ್ವೇದದ ವೈದ್ಯರು ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಆಯುರ್ವೇದ ವೈದ್ಯರು ತುಳುನಾಡ ರಕ್ಷಣಾ ವೇದಿಕೆ ಸಹಯೋಗದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ನಂತರ ಅಪರ ಜಿಲ್ಲಾಧಿಕಾರಿ ಮಮತಾದೇವಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಆಯುಷ್ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು ಈಗಾಗಲೇ ಮಹಾರಾಷ್ಟ್ರ ಮತ್ತು ಹಲವು ರಾಜ್ಯಗಳಲ್ಲಿ ಕಾಯ್ದೆಯಡಿ ಅವಕಾಶ ಇದೆ. ನಮ್ಮ ರಾಜ್ಯದಲ್ಲಿಯೂ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ವೈದ್ಯರ ಘಟಕ ಅಧ್ಯಕ್ಷ ರವೀಂದ್ರ, ಮುಖಂಡರಾದ ಡಾ.ಎನ್‌.ಟಿ. ಅಂಚನ್, ಡಾ.ರಾಜೇಶ್ ಶೆಟ್ಟಿ, ಡಾ.ಪ್ರಜಿತ್ ನಂಬಿಯಾರ್, ಡಾ.ಸಂದೀಪ್ ಸನಿಲ್, ಡಾ.ಜಯಮೋಹನ್ ನಂಬಿಯಾರ್, ಡಾ.ಸುರೇಶ್ ಕುಮಾರ್ ಶೆಟ್ಟಿ, ಡಾ.ಪ್ರಕಾಶ್ ಪೈ ಮತ್ತಿತತರು ಭಾಗವಹಿಸಿದ್ದರು.