ಎಸ್‌ಸಿ, ಎಸ್‌ಟಿ ಹಣ ಅನ್ಯ ಯೋಜನೆಗಳಿಗೆ ಬಳಸದಂತೆ ಒತ್ತಾಯ

| Published : Aug 03 2024, 12:35 AM IST

ಎಸ್‌ಸಿ, ಎಸ್‌ಟಿ ಹಣ ಅನ್ಯ ಯೋಜನೆಗಳಿಗೆ ಬಳಸದಂತೆ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಹುಣಸಗಿ ಪಟ್ಟಣದಲ್ಲಿ ಡಿಎಸ್‌ಎಸ್‌ ವತಿಯಿಂದ ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹುಣಸಗಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿಗಮದ ಹಣವನ್ನು ಬೇರೆ ಯೋಜನೆಗಳಿಗೆ ಬಳಸದಂತೆ ತಡೆಹಿಡಿಯಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಹುಣಸಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬೆಂಬಲದಿಂದ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರಕಾರ ದಲಿತರಿಗೆ ನಿರಂತರ ವಂಚನೆ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ ಮತ್ತು ಎಸ್‌ಟಿ ಯೋಜನೆಗಳಿಗೆ ಮೀಸಲಾದ ಅನುದಾನವನ್ನು ವರ್ಗಾವಣೆ ಮಾಡುತ್ತಿರುವುದು ಕಂಡು ಬಂದಿದೆ. ಎಸ್‌ಸಿ ಎಸ್‌ಟಿಗೆ ಮೀಸಲಾದ ಹಣವನ್ನು ಅನ್ಯ ಯೋಜನೆಗಳಿಗೆ ಬಳಸುವುದನ್ನು ಡಿಎಸ್‌ಎಸ್ ವಿರೋಧಿಸುತ್ತದೆ. ವಿದ್ಯಾರ್ಥಿಗಳ ಪ್ರೋತ್ಸಾಹ ಧನ, ಸಮಾಜ ಕಲ್ಯಾಣ ಇಲಾಖೆಯ ಅನುದಾನವನ್ನು ಕಡಿತಗೊಳಿಸುವುದನ್ನು ಪ್ರಬಲವಾಗಿ ಖಂಡಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ದಲಿತ ಮುಖಂಡ ಅಬ್ಲಪ್ಪ ಹಳ್ಳಿ, ಮಾಳಪ್ಪ ಕಿರದಳ್ಳಿ, ಯಲ್ಲಪ್ಪ ಕಡದರಗಡ್ಡಿ, ಲಕ್ಷ್ಮಣ ರಾಮಪೂರ, ಸಿದ್ದರಾಮ ಚನ್ನೂರು, ಶರಣ ಬಸವ, ಬಸವರಾಜ ವಜ್ಜಲ, ರಾಮಣ್ಣ ಮುದನೂರು, ಭೀಮಣ್ಣ ಹೆಬ್ಬಾಳ, ಪ್ರಭು ಕಚಕನೂರು ಸೇರಿದಂತೆ ಇತರರಿದ್ದರು.