ಬೇಡಿಕೆ ಈಡೇರಿಕೆಗೆ ಸರ್ಕಾರಿ ನೌಕರರ ಒತ್ತಾಯ

| Published : Jul 15 2024, 01:48 AM IST

ಬೇಡಿಕೆ ಈಡೇರಿಕೆಗೆ ಸರ್ಕಾರಿ ನೌಕರರ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಾ ಸರ್ಕಾರಿ ನೌಕರರ ಸಂಘದ ವತಿಯಿಂದ ಭಾನುವಾರ ಭೇಟಿ ಮಾಡಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಇಂಡಿ:

7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಾ ಸರ್ಕಾರಿ ನೌಕರರ ಸಂಘದ ವತಿಯಿಂದ ಭಾನುವಾರ ಭೇಟಿ ಮಾಡಿ ಮನವಿ ಮಾಡಿದರು.

ಈ ಸಂಧರ್ಬದಲ್ಲಿ ಸಂಘದ ತಾಲೂಕು ಅಧ್ಯಕ್ಷ ಎಸ್.ಡಿ.ಪಾಟೀಲ ಮಾತನಾಡಿ, ಸರ್ಕಾರಿ 7ನೇ ವೇತನ ಜಾರಿ ಮಾಡಬೇಕು. ಕರ್ನಾಟಕ ಸರ್ಕಾರ 7ನೇ ವೇತನ ಆಯೋಗದಿಂದ ಶೀಘ್ರ ವರದಿಯನ್ನು ಪಡೆದು 1 ಜುಲೈ 2022 ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಬೇಕು, 1 ಎಪ್ರೀಲ್ 2024 ರ ಅರ್ಥಿಕ ಸೌಲಭ್ಯ ನೀಡಿ ಸರಕಾರಿ ಆದೇಶ ಹೊರಡಿಸಬೇಕು. ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೆ ತರಬೇಕು. ರಾಜ್ಯ ಸರಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕೂಡಲೆ ಜಾರಿ ಮಾಡಬೇಕು. ಎನ್.ಪಿ.ಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರಕಾರದ ಜವಾಬ್ದಾರಿಯಾಗಿದೆ. ಪಂಜಾಬ್‌, ರಾಜಸ್ಥಾನ ಇತರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಿದ್ದು, ನಮ್ಮ ರಾಜ್ಯದಲ್ಲಿ ಕೂಡಾ ತರಬೇಕು. ರಾಜ್ಯ ಸರ್ಕಾರಿ ನೌಕರರ 3 ಪ್ರಮುಖ ಬೇಡಿಕೆಗಳನ್ನು ಇಡೇರಿಸಬೇಕು ಸರ್ಕಾರವನ್ನು ನೌಕರರು ಎಂದು ಒತ್ತಾಯಿಸಿದ್ದಾರೆ.ಅಧ್ಯಕ್ಷ ಎಸ್.ಡಿ.ಪಾಟೀಲ, ಕರಾನೌಸಂಘ ಮಾಜಿ ಅಧ್ಯಕ್ಷ ಎಸ್.ಆರ್.ಪಾಟೀಲ, ಜಿ.ಜಿ.ಬರಡೋಲ, ಆರ್.ವ್ಹಿ.ಪಾಟೀಲ, ಆರ್.ಕೆ.ದುದ್ದಗಿ, ಎಲ್.ಎ. ಅಲೇಗಾಂವ್, ಎಸ್.ಎಸ್‌.ಅತನೂರ, ಫಯಾಜ ಚೌದರಿ, ಭಾಷಾ ಕುಮಸಗಿ, ಶಂಕರ ಕೊಳೇಕರ್, ಸಿ.ಎಸ್.ಹಕಾರಿ, ಸಂಜು ಅಂಕಲಗಿ, ರಮೇಶ ಮಂಜಣಿ, ಬಸವರಾಜ ಗೊರನಾಳ, ಶ್ರೀಮಂತ ನೇದಲಗಿ, ಬಸವರಾಜ ಗಿಡಗಂಟಿ, ಎಫ್.ಎಂ.ದರ್ಗಾ, ಎಸ್.ಎನ್.ಕೋಳಿ ,ಗ್ರಾಪಂ ಅಭಿವೃದ್ದಿ ಅಧಿಕಾರಿಗಳಾದ ಚನ್ನಗೊಂಡ ಪಾರೆ ಸೇರಿದಂತೆ ಅನೇಕ ನೌಕರರು ಮನವಿ ಸಲ್ಲಿಸುವ ವೇಳೆ ಇದ್ದರು.----------------------------------

ಕೋಟ್‌

ಕರ್ನಾಟಕ ರಾಜ್ಯ ನೌಕರರ ಸಂಘ ಸೇರಿ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವುದರೊಂದಿಗೆ ನಿಮ್ಮ 3 ಬೇಡಿಕೆಗಳು ನ್ಯಾಯಯುತವಾಗಿವೆ. ಅವುಗಳನ್ನು ಈಡೇರಿಸಲು ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ.ಯಶವಂತರಾಯಗೌಡ ಪಾಟೀಲ, ಶಾಸಕಪೋಟೋಕ್ಯಾಪ್ಸನ್ 13 ಇಂಡಿ04- ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಾ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಕರ್ನಾಟಕ ಸರಕಾರದ ಅಂದಾಜು ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ ಇವರಿಗೆ 7ನೇ ವೇತನ ಜಾರಿಗೆ ಆಗ್ರಹಿಸಿ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕ.ರಾ.ನೌ.ಸಂಘದ ತಾಲೂಕಾ ಶಾಖೆಯ ಅಧ್ಯಕ್ಷರು ,ಪದಾಧಿಕಾರಿಗಳು ಇಂದು ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸುತ್ತಿರುವುದು.