ಸಾರಾಂಶ
ಒಳ ಮೀಸಲಾತಿ ಕುರಿತು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿ ಮಾದಿಗ ದಂಡೂರ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಮುಂದೆ ತಮಟೆ ಚಳವಳಿ ನಡೆಸಿದರು.
ಕನ್ನಡಪ್ರಭ ವಾರ್ತೆ ಗಂಗಾವತಿ
ಒಳ ಮೀಸಲಾತಿ ಕುರಿತು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿ ಮಾದಿಗ ದಂಡೂರ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಮುಂದೆ ತಮಟೆ ಚಳವಳಿ ನಡೆಸಿದರು.ಪ್ರತಿಭಟನಾಕಾರರು ತಮಟೆ ಬಾರಿಸುತ್ತಾ ಮೆರವಣಿಗೆ ಮೂಲಕ ತೆರಳಿ ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಿದರು. ಈ ಸಂದರ್ಭ ಮಾತನಾಡಿದ ಮಾದಿಗ ದಂಡೂರ ಮತ್ತು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಬಿ. ಹುಸೇನಪ್ಪ ಸ್ವಾಮಿ ಮಾದಿಗ, ಬೆಳಗಾವಿ ಅಧಿವೇಶನದಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಧ್ವನಿ ಎತ್ತುವುದರ ಮೂಲಕ ನ್ಯಾಯ ಸಮ್ಮತವಾದ ಒಳ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಶಾಸಕ ರೆಡ್ಡಿ ಮಾತನಾಡಿ, ಸುಪ್ರೀಂ ಕೋರ್ಟ್ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವವಾದ ತೀರ್ಪನ್ನು ನೀಡಿದ್ದು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಸೂಕ್ತವಲ್ಲ. ತಾವು ಸಾಮಾಜಿಕ ನ್ಯಾಯದ ಹಿನ್ನೆಲೆ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ದುರ್ಗೇಶ ದೊಡ್ಡಮನಿ, ಹನುಮಂತಪ್ಪ ದುರ್ಗಪ್ಪ, ಶಿವಪ್ಪ ಮಾದಿಗ, ಸೋಮು ಕಂಪ್ಲಿ, ಬಾಲಪ್ಪ ಕಾಮದೊಡ್ಡಿ, ಸಂಗಮೇಶ, ಸೋಮನಾಥ್ ಭಂಡಾರಿ, ಹನುಮಂತಪ್ಪ ಡಗ್ಗಿ ಸೇರಿದಂತೆ ಸಮಾಜದವರು ಪಾಲ್ಗೊಂಡಿದ್ದರು.