ನಗರಸಭೆಯ ವತಿಯಿಂದ ಸರ್ಕಾರಿ ಆಸ್ಪತ್ರೆಗೆ ನೀರು ಪೂರೈಕೆಗೆ ಮೀಸಲಿಟ್ಟಿರುವ ಟ್ಯಾಂಕ್‌ನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಟ್ಯಾಂಕ್ ಸಮೀಪದಲ್ಲಿಯೇ ಶಾಲೆ ಇರುವುದರಿಂದ, ಮಕ್ಕಳ ಆರೋಗ್ಯದ ದೃಷ್ಟಿಯಿಂದಲೂ ಪರಿಸರವನ್ನು ಸದಾ ಸ್ವಚ್ಛವಾಗಿ ಹಾಗೂ ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದರು. ಈ ಟ್ಯಾಂಕ್‌ನ ನೀರು ನೇರವಾಗಿ ಆಸ್ಪತ್ರೆಗೆ ಸರಬರಾಜಾಗುತ್ತಿರುವ ಹಿನ್ನೆಲೆ, ಸ್ವಚ್ಛತೆಯಲ್ಲಿ ಯಾವುದೇ ನಿರ್ಲಕ್ಷ್ಯ ತಾಳಬಾರದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಲಿಂಗರಾಜ್ ಅವರಿಗೆ ಸೂಚಿಸಿದರು. ಟ್ಯಾಂಕ್ ಆವರಣದ ಸ್ವಚ್ಛತಾ ಕಾರ್ಯವನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ಸರ್ಕಾರಿ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕ ಬಳಕೆಗೆ ಮೀಸಲಿಟ್ಟಿರುವ ಕುಡಿಯುವ ನೀರಿನ ಟ್ಯಾಂಕ್‌ನ ಪರಿಸರ ಸ್ವಚ್ಛತೆ ಮತ್ತು ನಿರ್ವಹಣೆ ಅತ್ಯಂತ ಮಹತ್ವದ್ದಾಗಿದ್ದು, ಇದರಲ್ಲಿ ಯಾವುದೇ ಲೋಪವಾಗದಂತೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರಸಭಾ ಆಯುಕ್ತ ಕೃಷ್ಣಮೂರ್ತಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರಸಭೆಯ ವತಿಯಿಂದ ಸರ್ಕಾರಿ ಆಸ್ಪತ್ರೆಗೆ ನೀರು ಪೂರೈಕೆಗೆ ಮೀಸಲಿಟ್ಟಿರುವ ಟ್ಯಾಂಕ್‌ನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಟ್ಯಾಂಕ್ ಸಮೀಪದಲ್ಲಿಯೇ ಶಾಲೆ ಇರುವುದರಿಂದ, ಮಕ್ಕಳ ಆರೋಗ್ಯದ ದೃಷ್ಟಿಯಿಂದಲೂ ಪರಿಸರವನ್ನು ಸದಾ ಸ್ವಚ್ಛವಾಗಿ ಹಾಗೂ ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದರು. ಈ ಟ್ಯಾಂಕ್‌ನ ನೀರು ನೇರವಾಗಿ ಆಸ್ಪತ್ರೆಗೆ ಸರಬರಾಜಾಗುತ್ತಿರುವ ಹಿನ್ನೆಲೆ, ಸ್ವಚ್ಛತೆಯಲ್ಲಿ ಯಾವುದೇ ನಿರ್ಲಕ್ಷ್ಯ ತಾಳಬಾರದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಲಿಂಗರಾಜ್ ಅವರಿಗೆ ಸೂಚಿಸಿದರು. ಟ್ಯಾಂಕ್ ಆವರಣದ ಸ್ವಚ್ಛತಾ ಕಾರ್ಯವನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.ನಗರಸಭೆ ಕುಡಿಯುವ ನೀರು ಪೂರೈಕೆ, ನೈರ್ಮಲ್ಯ ಹಾಗೂ ಬೀದಿದೀಪಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಇದರ ಫಲವಾಗಿ ನಗರ ವ್ಯಾಪ್ತಿಯಲ್ಲಿ ಬಹುತೇಕ ಸಮಸ್ಯೆಗಳು ಗಣನೀಯವಾಗಿ ಕಡಿಮೆಯಾಗಿವೆ. ನಗರಸಭೆಯೊಂದಿಗೆ ಸಾರ್ವಜನಿಕರು ಸಹಕಾರ ನೀಡಿದರೆ ಇನ್ನಷ್ಟು ಉತ್ತಮವಾಗಿ ನಗರ ಪರಿಸರವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಆಯುಕ್ತರು ಅಭಿಪ್ರಾಯಪಟ್ಟರು.ಆಯುಕ್ತರ ಈ ಭೇಟಿ ಶಾಲಾ ಶಿಕ್ಷಕರು ಹಾಗೂ ಪೋಷಕರಲ್ಲಿ ಸಂತಸ ಮೂಡಿಸಿತು. ಈ ಸಂದರ್ಭದಲ್ಲಿ ಶಿಕ್ಷಕರು, ಟ್ಯಾಂಕ್ ಆವರಣದ ಬಳಿ ಮಕ್ಕಳಿಗೆ ಉಪಯುಕ್ತವಾಗುವ ಉದ್ಯಾನವನವನ್ನು ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು. ಈ ಬೇಡಿಕೆಯನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಕೃಷ್ಣಮೂರ್ತಿ ಭರವಸೆ ನೀಡಿದರು.